ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ.
ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ ಘಾಟ್ ಅರಣ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ಕಾಡ್ಗಿಚ್ಚು ಕ್ಷಣದಿಂದ ಕ್ಷಣಕ್ಕೆ ಹಬ್ಬಲು ಪ್ರಾರಂಭವಾಗಿದೆ.
ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದೆ.
ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ಮುಂಜಾಗ್ರತೆ ಕ್ರಮವಾಗಿ ಈ ಭಾಗದಲ್ಲಿ ಬೆಂಕಿ ರೇಖೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…