Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಬೆಳಗಾವಿ | ಮತ್ತೊಂದು ಸಾಮೂಹಿಕ ಅತ್ಯಾಚಾರ : ಇಬ್ಬರ ಬಂಧನ

Another gang rape

ಬೆಳಗಾವಿ : ಇತ್ತೀಚೆಗೆ ರೆಸಾರ್ಟ್‌ವೊಂದರಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣ ಮಾಸುವೆ ಮುನ್ನವೇ ಇಂತದ್ದೇ ಹೇಯ ಕೃತ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 15 ವರ್ಷದ ಬಾಲಕಿ ಮೇ  6 ಮಂದಿ ದುರುಳರಿಂದ ಎರಡೆರಡು ಭಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಬಗ್ಗೆ ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಘಟನೆ ವಿವರ ;
ಕಳೆದ 6 ತಿಂಗಳ ಹಿಂದೆ ಬಾಲಕಿಯನ್ನ ಸ್ನೇಹಿತನೊಬ್ಬ ಪುಸಲಾಯಿಸಿ ಗುಡ್ಡಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿ, ಅದನ್ನು ವೀಡಿಯೊ ಮಾಡಿದ್ದ.
ಬಳಿಕ ಅದೇ ವೀಡಿಯೊ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌‍ ಮಾಡಿ ಅಪ್ರಾಪ್ತೆಯ ಮೇಲೆ ಮತ್ತೊಮೆ ರೇಪ್‌ ಮಾಡಿದ್ದರು. ಈ ಸಂದರ್ಭದಲ್ಲೂಆತನ ಸ್ನೇಹಿತರು ವೀಡಿಯೊ ಮಾಡಿಕೊಂಡಿದ್ದರು.

ಈ ವೀಡಿಯೊ ಇಟ್ಟುಕೊಂಡು ಮತ್ತೆ ಮತ್ತೆ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ದೂರಲಾಗಿದೆ. ಸಾಮೂಹಿಕ ಅತ್ಯಾಚಾರ ಘಟನೆ ಮತ್ತೆ ಕುಂದಾ ನಗರಿಯನ್ನು ಬೆಚ್ಚಿಬೀಳಿಸಿದೆ.

Tags:
error: Content is protected !!