ರಾಜ್ಯ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್‌ನ್ಯೂಸ್:‌ ಆಗಸ್ಟ್.‌10ರಂದು ಪ್ರಧಾನಿ ಮೋದಿಯಿಂದ ಯೆಲ್ಲೋ ಲೈನ್‌ ಉದ್ಘಾಟನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್.‌10ರಂದು ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮೆಟ್ರೋ ಯೆಲ್ಲೋ ಲೈನ್‌ ಉದ್ಘಾಟನೆ ಮಾಡಲಿದ್ದಾರೆ.

ಈ ಬಗ್ಗೆ ಅಧಿಕೃತವಾಗಿ ಕೇಂದ್ರ ಸಚಿವ ಮನೋಹರ್‌ ಲಾಲ್ ಮಾಹಿತಿ ನೀಡಿದ್ದು, ಜೊತೆಗೆ ಮೆಟ್ರೋ ಫೇಸ್‌ 3ಗೂ ಮೋದಿಯವರು ಅಂದೇ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಹಳದಿ ಮಾರ್ಗ ಸುಮಾರು 19.5 ಕಿ.ಮೀ ಇದ್ದು, ಸಂಚಾರ ಮುಕ್ತಕ್ಕೆ ಸಿದ್ಧವಾಗಿದೆ. ಈ ಮಾರ್ಗ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ, ಎಲೆಕ್ಟ್ರಾನಿಕ್‌ ಸಿಟಿಗೆ ಸಂಪರ್ಕ ಕಲ್ಪಿಸಲಿದೆ.

ಪ್ರತಿ ದಿನ ಸುಮಾರು 25,000 ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ನಿರೀಕ್ಷೆ ಇದೆ. ರೈಲುಗಳು 20 ರಿಂದ 30 ನಿಮಿಷಗಳ ಅಂತರದಲ್ಲಿ ಸಂಚರಿಸುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

4 mins ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

3 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago