ರಾಜ್ಯ

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ: ಸಾಕು ನಾಯಿಗಳಿಗೆ ವಿಷ ಹಾಕಿ ಕೊಂದ ಪಾಪಿಗಳು

ಚಿಕ್ಕಮಗಳೂರು: ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, 8 ಸಾಕು ನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿ ಕೊಂದು ಹಾಕಿರುವ ಘಟನೆ ಜಿಲ್ಲೆಯ ಎನ್.ಆರ್.‌ಪುರದ ಅಬ್ಬಿಗುಂಡಿ ಬಳಿ ನಡೆದಿದೆ.

ಸತ್ಯನಾರಾಯಣ ಎಂಬುವವರ ಮನೆಯಲ್ಲಿ ಸಾಕಿದ್ದ 8 ನಾಯಿಗಳಿಗೆ ವಿಷ ಹಾಕಿ ಕೊಲ್ಲಲಾಗಿದೆ. ಸತ್ತ ಕೋಳಿಗಳಿಗೆ ಕ್ರಿಮಿನಾಶಕ ಹಾಕಿ ಇಡಲಾಗಿತ್ತು. ಅದನ್ನು ತಿಂದು 8 ನಾಯಿಗಳು ಮೃತಪಟ್ಟಿವೆ.

ಘಟನೆಗೆ ಗ್ರಾಮಸ್ಥರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾರೆ. ಸಾಕು ನಾಯಿ ಸಾವಿಗೆ ಮಾಲೀಕರು ಕಂಬನಿ ಮಿಡಿದಿದ್ದು, ಮನೆ ಮಾಲೀಕರ ಮೇಲಿನ ದ್ವೇಷಕ್ಕೆ ಕೃತ್ಯ ಎಸಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

52 seconds ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

6 mins ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

15 mins ago

ನಗರ ಪಾಲಿಕೆಯಲ್ಲಿ ವೈದ್ಯ ಪದವಿ ಆರೋಗ್ಯಾಧಿಕಾರಿಗೆ ಕೊಕ್: ಇಂಜಿನಿಯರ್‌ಗೆ ಹೊಸ ಹುದ್ದೆ!

ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…

23 mins ago

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

9 hours ago