ರಾಜ್ಯ

ಬಜೆಟ್‌ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್‌ನಲ್ಲಿ ಯಾವುದೇ ಗಣನೀಯ ಸುಧಾರಣೆ ಆಗಿಲ್ಲ. ಸರ್ಕಾರಿ ವೆಚ್ಚಗಳ ಮೇಲೆ ಯಾವುದೇ ನಿಯಂತ್ರಣವೂ ಇಲ್ಲ. ಕರ್ನಾಟಕಕ್ಕಂತೂ ಹೇಳಿಕೊಳ್ಳುವಂತಹ ಪ್ರಯೋಜನ ಈ ಬಜೆಟ್ ನಲ್ಲಿ ಆಗಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಹೈದ್ರಾಬಾದ್ – ಬೆಂಗಳೂರು ಹೈಸ್ಪೀಡ್ ರೈಲು ಸಮಾಧಾನಕರ ಬಹುಮಾನದಂತಿದೆ. ರೈತರು ಬೆಳೆಯುವ ಎಲ್ಲ ಬೆಳೆಗಳಿಗೂ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ನೀಡುವಲ್ಲಿ ಈ ಬಾರಿಯೂ ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಶ್ರೀಗಂಧ ಬೆಳೆಗೆ ಉತ್ತೇಜನದ ಮಾತುಗಳನ್ನಾಡಿದೆ. ಆದರೆ ಅದು ಹೇಗೆ ಕಾರ್ಯಗತವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸ್ವಾಭಾವಿಕವಾಗಿ ಬೆಳೆಯುವ ಶ್ರೀಗಂಧದಲ್ಲಿ ತೈಲದ ಅಂಶ ಇರುತ್ತದೆ. ಆದರೆ ರೈತರು ಜಮೀನಿನಲ್ಲಿ ಗೊಬ್ಬರ ಹಾಕಿ ಬೆಳೆಯುವ ಶ್ರೀಗಂಧಕ್ಕೆ ಹೆಚ್ಚಿನ ಬೆಲೆ ದೊರಕುವುದಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ರೈತರು ಸಂಕಷ್ಟ ಅನುಭವಿಸುತ್ತಾರೆ ಎಂದೂ ಅರಣ್ಯ ಸಚಿವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ನೂತನ ಶ್ರೀಗಂಧದ ನೀತಿ ರಚಿಸಿದೆ. ಕಡಲ ಆಮೆಗಳ ಸಂರಕ್ಷಣೆಯನ್ನು ಪ್ರವಾಸೋದ್ಯಮದಲ್ಲಿ ಸೇರಿಸಲಾಗಿದೆ. ಕರ್ನಾಟಕದ ಮಂಗಳೂರು ಮತ್ತು ಕಾರವಾರದಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕಡಲಾಮೆಗಳ ಮೊಟ್ಟೆಗಳ ಸಂರಕ್ಷಣೆ ಮತ್ತು ಮರಿಗಳ ರಕ್ಷಣೆಗೆ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಈ ಯೋಜನೆಗೆ ಮಾದರಿಯಾಗಿದೆ ಎಂದೂ ತಿಳಿಸಿದ್ದಾರೆ.

ಕಳೆದ 12 ವರ್ಷಗಳಲ್ಲಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ನುಡಿದಂತೆ ನಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಬಜೆಟ್ ನಲ್ಲಿಯೂ ರಾಜ್ಯದಲ್ಲಿ ಯುವಜನರಿಗೆ ಉದ್ಯೋಗ ಸೃಷ್ಟಿಸುವಂತಹ ಯಾವುದೇ ಯೋಜನೆ ಕಾಣುತ್ತಿಲ್ಲ. ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿದೆ ಎಂದು ಈಶ್ವರ ಖಂಡ್ರೆ 2026ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

10 mins ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

29 mins ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

40 mins ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

53 mins ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

11 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

11 hours ago