ರಾಜ್ಯ

ಹುಬ್ಬಳ್ಳಿಯಲ್ಲಿ ಮತ್ತೊಂದು ಹತ್ಯೆ; ಚಾಕು ಇರಿದು ಯುವಕನ ಕೊಲೆ

ಹುಬ್ಬಳ್ಳಿ: ನೇಹ ಹಿರೇಮಠ ಹಾಗೂ ಅಂಜಲಿ ಅಂಬಿಗೇರೆ ಹತ್ಯೆ ಪ್ರಕರಣಗಳನ್ನು ಹುಬ್ಬಳ್ಳಿ ಜನತೆ ಇನ್ನೂ ಮರೆತಿಲ್ಲ. ಈ ನಡುವೆ ಇದೀಗ ಮತ್ತೊಂದು ಕೊಲೆ ನಡೆದಿದ್ದು, ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿದ ಘಟನೆ ಲೋಹಿಯಾ ನಗರದಲ್ಲಿ ನಡೆದಿದೆ. ಆಕಾಶ್‌ ಮಠಪತಿ(26) ಕೊಲೆಯಾದ ಯುವಕ. ಮೃತ ಯುವಕ ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರನಾಗಿದ್ದಾರೆ.

ಶನಿವಾರ ಸಂಜೆ(ಜೂ.22) ಹಳೇ ದ್ವೇಷದ ಹಿನ್ನೆಲೆ ಮದ್ಯ ಕುಡಿಸಿ ದುಷ್ಕರ್ಮಿಗಳಿಂದ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರಗ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

36 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

51 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

1 hour ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

1 hour ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

1 hour ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

2 hours ago