ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ.
ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು ಬೆಳಿಗ್ಗೆ 10.30ರ ವೇಳೆ ಖಾಸಗಿ ಬಸ್ಸೊಂದು ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ. ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಪ್ರಾಣಾಪಾಯದ ಸಂಭವಿಸಿಲ್ಲ.
ಇನ್ನು ಮಾಹಿತಿ ಪ್ರಕಾರ ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಬಸ್ಸಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಇದರಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





