ರಾಜ್ಯ

ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರನಿಂದ ಮತ್ತೊಂದು ಯಡವಟ್ಟು

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಮತ್ತೊಂದು ವಿವಾದ ಸೃಷ್ಟಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ಸನ್ನೆ ತೋರಿಸಿದ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ನವೆಂಬರ್.‌28ರಂದು ಈ ಘಟನೆ ನಡೆದಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಜೈದ್‌ ಖಾನ್‌, ಮೊಹಮ್ಮದ್‌ ನಲಪಾಡ್‌ ಜೊತೆ ಆರ್ಯನ್‌ ಬೆಂಗಳೂರಿನ ಪಬ್‌ಗೆ ಬಂದಿದ್ದನು ಎನ್ನಲಾಗಿದೆ.

ಪಬ್‌ನಲ್ಲಿ ಮಿಡಲ್‌ ಫಿಂಗರ್‌ ತೋರಿಸಿ ಸಾರ್ವಜನಿಕವಾಗಿ ದುರ್ವರ್ತನೆ ತೋರಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಅಶೋಕನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅಭಿಮಾನಿಗಳತ್ತ ಕೈ ಬೀಸುವಾಗ ಶಾರುಖ್‌ ಖಾನ್‌ ಪುತ್ರ ಮಿಡಲ್‌ ಫಿಂಗರ್‌ ತೋರಿಸುವಾಗ ಅಸಭ್ಯ ವರ್ತಿಸಿದ್ದಾರೆ. ಸದ್ಯಕ್ಕೆ ದೂರು ದಾಖಲಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

10 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

10 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

10 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

10 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

11 hours ago