ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಜುಲೈ 15ರಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವುದಕ್ಕೆ ಕೋರ್ಟ್ ವಿನಾಯಿತಿ ನೀಡಿದೆ.
ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದು ಹಾಗೂ ಜಾಮೀನು ಕೋರಿ ಮಾಜಿ ಸಿಎಂ ಬಿಎಸ್‌ವೈ ಅವರು ಸಲ್ಲಿಸಿದ್ದ ಅರ್ಜಿಗಳು ಇಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಶೇಷ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದವು.
ಕೆಲಕಾಲ ವಿಚಾರಣೆ ಆಲಿಸಿದ ನ್ಯಾಯಾಲಯ ಪ್ರಕರಣ ಮುಂದೂಡುವಂತೆ ಮಾಡಿದ ಮನವಿಯನ್ನು ಮಾನ್ಯ ಮಾಡಲಾಗಿದೆ. ಹಾಗಾಗಿ, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅರ್ಜಿದಾರರ ಖುದ್ದು ಹಾಜರಿಗೆ ಜುಲೈ.28ರವರೆಗೆ ವಿನಾಯಿತಿ ನೀಡಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಜುಲೈ.26ಕ್ಕೆ ಮುಂದೂಡಿದ್ದಾರೆ.
ಎಸ್‌ಪಿಸಿ ಬಿಎನ್ ಜಗದೀಶ್ ಅವರು ಪ್ರಕರಣದಲ್ಲಿ ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಹಾಗಾಗಿ ಸ್ವಲ್ಪ ಸಮಯಾವಕಾಶ ನೀಡಬೇಕು ಎಂದು ಕೋರಿದರು.
ಆಗ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಸಿವಿ ನಾಗೇಶ್ ಅವರು, ಪ್ರಕರಣ ಸಂಬಂಧ ಸಿಐಡಿ ವಿಚಾರಣಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದೆ. ಅದನ್ನು ದಾಖಲಿಸಿಕೊಡ ನ್ಯಾಯಾಲಯ, ಅರ್ಜಿದಾರರೂ ಸೇರಿ ಎಲ್ಲಾ ಆರೋಪಿಗಳಿಗೆ ಜುಲೈ.15ರಂದು ಖುದ್ದು ಹಾಜರಾಗುವತೆ ಸಮನ್ಸ್ ಜಾರಿಗೊಳಿಸಿದೆ. ಹಾಗಾಗಿ ಸಮಯ ನೀಡಬಾರದು ವಿಚಾರಣೆ ನಡೆಸಬೇಕು ಎಂದು ಹೇಳಿದರು.
ಅದಕ್ಕೆ ನ್ಯಾಯಪೀಠ ಈಗಾಗಲೇ ನಿಮಗೆ ಬಂಧಿಸದಂತೆ ರಕ್ಷಣೆ ನೀಡಲಾಗಿದೆ. ಹಾಗಾಗಿ ಒಂದೆರಡು ವಾರ ವಿಚಾರಣೆ ಮುಂದೂಡಿ ಪ್ರಾಸಿಕ್ಯೂಷನ್‌ಗೆ ಸಮಯ ನೀಡೋಣ ಎಂದು ಹೇಳಿದೆ.
ಬಿಎಸ್‌ವೈ ಪರ ವಕೀಲರು, ಇಲ್ಲ ಸೋಮವಾರವೇ ಅರ್ಜಿದಾರರು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಹಾಗಾಗಿ ವಿಚಾರಣೆ ಮುಂದುವರಿಸಬೇಕು ಎಂದು ಕೋರಿದರು.
ಆಗ ನ್ಯಾಯಪೀಠ, ಹಾಗಿದ್ದರೆ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿದಾರರು ಮತ್ತಿತರರಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಸೂಚಿಸಲಾಗುವುದು. ವಿಚಾರಣೆ ಮುಂದೂಡಲಾಗುವುದು ಎಂದು ಹೇಳಿ ಅದರಂತೆ ಆದೇಶ ಹೊರಡಿಸಿತು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…