ರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಮತ್ತೊಂದು ರಿಲೀಫ್:‌ ಕೋರ್ಟ್‌ ಹಾಜರಿಗೆ ವಿನಾಯಿತಿ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಜುಲೈ 15ರಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವುದಕ್ಕೆ ಕೋರ್ಟ್‌ ವಿನಾಯಿತಿ ನೀಡಿದೆ.

ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್‌ ರದ್ದು ಹಾಗೂ ಜಾಮೀನು ಕೋರಿ ಮಾಜಿ ಸಿಎಂ ಬಿಎಸ್‌ವೈ ಅವರು ಸಲ್ಲಿಸಿದ್ದ ಅರ್ಜಿಗಳು ಇಂದು ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್‌ ಅವರಿದ್ದ ವಿಶೇಷ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದವು.

ಕೆಲಕಾಲ ವಿಚಾರಣೆ ಆಲಿಸಿದ ನ್ಯಾಯಾಲಯ ಪ್ರಕರಣ ಮುಂದೂಡುವಂತೆ ಮಾಡಿದ ಮನವಿಯನ್ನು ಮಾನ್ಯ ಮಾಡಲಾಗಿದೆ. ಹಾಗಾಗಿ, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅರ್ಜಿದಾರರ ಖುದ್ದು ಹಾಜರಿಗೆ ಜುಲೈ.28ರವರೆಗೆ ವಿನಾಯಿತಿ ನೀಡಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಜುಲೈ.26ಕ್ಕೆ ಮುಂದೂಡಿದ್ದಾರೆ.

ಎಸ್‌ಪಿಸಿ ಬಿಎನ್‌ ಜಗದೀಶ್‌ ಅವರು ಪ್ರಕರಣದಲ್ಲಿ ಅಡ್ವೋಕೇಟ್‌ ಜನರಲ್‌ ವಾದ ಮಂಡಿಸಲಿದ್ದಾರೆ. ಹಾಗಾಗಿ ಸ್ವಲ್ಪ ಸಮಯಾವಕಾಶ ನೀಡಬೇಕು ಎಂದು ಕೋರಿದರು.

ಆಗ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಸಿವಿ ನಾಗೇಶ್‌ ಅವರು, ಪ್ರಕರಣ ಸಂಬಂಧ ಸಿಐಡಿ ವಿಚಾರಣಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದೆ. ಅದನ್ನು ದಾಖಲಿಸಿಕೊಡ ನ್ಯಾಯಾಲಯ, ಅರ್ಜಿದಾರರೂ ಸೇರಿ ಎಲ್ಲಾ ಆರೋಪಿಗಳಿಗೆ ಜುಲೈ.15ರಂದು ಖುದ್ದು ಹಾಜರಾಗುವತೆ ಸಮನ್ಸ್‌ ಜಾರಿಗೊಳಿಸಿದೆ. ಹಾಗಾಗಿ ಸಮಯ ನೀಡಬಾರದು ವಿಚಾರಣೆ ನಡೆಸಬೇಕು ಎಂದು ಹೇಳಿದರು.

ಅದಕ್ಕೆ ನ್ಯಾಯಪೀಠ ಈಗಾಗಲೇ ನಿಮಗೆ ಬಂಧಿಸದಂತೆ ರಕ್ಷಣೆ ನೀಡಲಾಗಿದೆ. ಹಾಗಾಗಿ ಒಂದೆರಡು ವಾರ ವಿಚಾರಣೆ ಮುಂದೂಡಿ ಪ್ರಾಸಿಕ್ಯೂಷನ್‌ಗೆ ಸಮಯ ನೀಡೋಣ ಎಂದು ಹೇಳಿದೆ.

ಬಿಎಸ್‌ವೈ ಪರ ವಕೀಲರು, ಇಲ್ಲ ಸೋಮವಾರವೇ ಅರ್ಜಿದಾರರು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಹಾಗಾಗಿ ವಿಚಾರಣೆ ಮುಂದುವರಿಸಬೇಕು ಎಂದು ಕೋರಿದರು.

ಆಗ ನ್ಯಾಯಪೀಠ, ಹಾಗಿದ್ದರೆ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿದಾರರು ಮತ್ತಿತರರಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಸೂಚಿಸಲಾಗುವುದು. ವಿಚಾರಣೆ ಮುಂದೂಡಲಾಗುವುದು ಎಂದು ಹೇಳಿ ಅದರಂತೆ ಆದೇಶ ಹೊರಡಿಸಿತು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago