ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ ಮಠದ ಆಸ್ತಿಯನ್ನು ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ.
ಎರಡು ಕೋಟಿ ರೂಪಾಯಿ ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಾರಾಟ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿರುವ ನಾಲ್ಕು ನಿವೇಶನಗಳನ್ನು ಮಾರಾಟ ಮಾಡಲಾಗಿದೆ ಎಂದು ಹೇಳಲಾಗಿದೆ.
ಮಂಜುನಾಥ ಎಂಬುವವರಿಗೆ ಸ್ಪೆಷಲ್ ಜಿಪಿಎ ನೀಡಿ ನಿವೇಶನ ಮಾರಾಟ ಮಾಡಲಾಗಿದೆ. ಶರಣರು ಪೋಕ್ಸೋ ಪ್ರಕರಣದ ಆರೋಪಿಯಾದ ನಂತರ ನ್ಯಾಯಾಲಯ ನಿರ್ಬಂಧ ವಿಧಿಸಿದೆ. ರಾಜ್ಯ ಸರ್ಕಾರದಿಂದ ಮಠಕ್ಕೆ ಆಡಳಿತ ಸಮಿತಿಯನ್ನು ನೇಮಕ ಮಾಡಲಾಗಿದೆ.
ಪ್ರಕಾಶ್ ಎಂಬುವವರಿಂದ ಆಡಳಿತ ಸಮಿತಿಗೆ ನಿವೇಶನಗಳ ಮಾರಾಟ ಕುರಿತಾಗಿ ದೂರು ನೀಡಲಾಗಿದೆ ಆಡಳಿತ ಸಮಿತಿ ಅಧ್ಯಕ್ಷ ಶಿವಯೋಗಿ ಕಳಸದ್ ಅವರಿಗೆ ದೂರು ನೀಡಲಾಗಿದ್ದು, ಕಾನೂನು ತಜ್ಞರಿಂದ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿದೆ ಎನ್ನಲಾಗಿದೆ.
೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು…
ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…
ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬…
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…