ರಾಜ್ಯ

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ವಿದ್ಯುತ್‌ ದರ ಏರಿಕೆ ಸಾಧ್ಯತೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದ ವಿದ್ಯುತ್ ಪೂರೈಕೆ ಮಾಡುವ ಬಹುತೇಕ ಕಂಪನಿಗಳು ನಷ್ಟದ ಹಳಿಯಲ್ಲಿದ್ದು, ಆದಾಯ ಸರಿದೂಗಿಸಲು ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್‍ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.

ಏಪ್ರಿಲ್ 1 ರಿಂದ ಜಾರಿಗೆ ಬರುವ ಸಾಧ್ಯತೆ ಇದ್ದು, ಕೈಗಾರಿಕೆ, ವಾಣಿಜ್ಯ ಮತ್ತು ಗೃಹ ಬಳಕೆದಾರರ ಮೇಲೆ ಪರಿಣಾಮ ಬೀರಬಹುದು. ಕರ್ನಾಟಕದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳು 4,900 ಕೋಟಿಗೂ ಹೆಚ್ಚು ಆದಾಯದ ಕೊರತೆಯನ್ನು ಸರಿದೂಗಿಸಲು 2026ರ ಏಪ್ರಿಲ್?ನಿಂದ ವಿದ್ಯುತ್ ದರವನ್ನು ಮತ್ತೆ ಪರಿಷ್ಕರಿಸುವ (ಹೆಚ್ಚಿಸುವ) ಸಾಧ್ಯತೆ ದಟ್ಟವಾಗಿದೆ.

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿದ್ದು, ಸಾರ್ವಜನಿಕ ವಿಚಾರಣೆಯ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಹೆಚ್ಚಳವು ಪ್ರತಿ ಯೂನಿಟ್?ಗೆ 8-10 ಪೈಸೆಗಳಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ.

ಎಸ್ಕಾಂಗಳ ಆದಾಯದ ಕೊರತೆಯನ್ನು ಸರಿದೂಗಿಸಲು ಪರ್ಯಾಯ ವ್ಯವಸ್ಥೆಗೆ ಮನವಿ ಮಾಡಲಾಗಿದೆ. 2025 ರ ಮಾರ್ಚ್‍ನಲ್ಲಿ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಪ್ರತಿ ಯೂನಿಟ್?ಗೆ 36 ಪೈಸೆಯಷ್ಟು ವಿದ್ಯುತ್ ದರವನ್ನು ಹೆಚ್ಚಿಸಿತ್ತು. ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ತಮ 4,620 ಕೋಟಿ ರೂಪಾಯಿಗಳ ಆದಾಯದ ಅಂತರವನ್ನು ಸರಿದೂಗಿಸಲು ವಿದ್ಯುತ್ ಸರಬರಾಜು ನಿಗಮ ನಿಯಮಿತ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವನ್ನು ಕೋರಿದೆ ಎಂದು ತಿಳಿದುಬಂದಿದೆ.

ಕಳೆದ ವರ್ಷದ ಮಾರ್ಚ್‍ನಲ್ಲಿ ದರ ಪರಿಷ್ಕರಣೆ ಮಾಡಿದಾಗ ಕೆಇಆರ್‍ಸಿ ಅಂದಾಜು ಮಾಡಿದ್ದ ಲೆಕ್ಕಾಚಾರದಲ್ಲಿ ವೆಚ್ಚ ಹೆಚ್ಚಾಗಿದ್ದರೆ, ಆದಾಯದಲ್ಲಿ ಖೋತಾ ಆಗಿದೆ. ಇದರ ನಡುವೆ ಸಮತೋಲನ ಕಾಪಾಡಲು ದರ ಪರಿಷ್ಕರಣೆ ಮಾಡುವ ಅಗತ್ಯವಿದೆ ಎಂದು ಎಸ್ಕಾಂಗಳು ಕೆಇಆರ್‍ಸಿಗೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿವೆ.

ವಿದ್ಯುತ್ ಖರೀದಿ, ಬಡ್ಡಿ ಪಾವತಿ ಮತ್ತು ಹಣಕಾಸು ವೆಚ್ಚ, ಕಾರ್ಯಾಚರಣೆ ಮತ್ತು ನಿರ್ವಹಣೆ ಇತ್ಯಾದಿಗಳಿಗೆ ಕೆಇಆರ್‍ಸಿ ಅಂದಾಜಿಸಿದ್ದಕ್ಕಿಂತ ಅಧಿಕ ವೆಚ್ಚವಾಗಿದೆ ಎಂದು ತೋರಿಸಲಾಗಿದೆ. ಆಯೋಗಕ್ಕೆ ಸಲ್ಲಿಸಿರುವ ಮಾಹಿತಿ ಪ್ರಕಾರ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ (ಬೆಸ್ಕಾಂ) ಅತಿ ಹೆಚ್ಚು, ಅಂದರೆ 2,802.82 ಕೋಟಿ ಖೋತಾ ಆಗಿದೆ. ಉಳಿದೆಲ್ಲ ಎಸ್ಕಾಂಗಳ ಆದಾಯದಲ್ಲೂ ಎರಡು ಸಾವಿರ ಕೋಟಿಗೂ ಅಧಿಕ ಖೋತಾ ಆಗಿದೆ. ದರ ಪರಿಷ್ಕರಣೆ ಮಾಡದಿದ್ದರೆ ಕಂಪನಿಗಳ ನಿರ್ವಹಣೆ ಕಷ್ಟವಾಗಲಿದೆ. ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ವಿವರಿಸಲಾಗಿದೆ.

2025ರ ಮಾರ್ಚ್‍ನಲ್ಲಿ ದರ ಪರಿಷ್ಕರಣೆ ಮಾಡಿ ಹೊರಡಿಸಿರುವ ಆದೇಶವನ್ನು ಮರು ಪರಿಶೀಲಿಸಬೇಕು ಎಂದು ಕೋರಿ ಎಸ್ಕಾಂಗಳು ಕೆಇಆರ್‍ಸಿಗೆ ಪ್ರತ್ಯೆ?ಕ ಅರ್ಜಿಯನ್ನು ಈಗಾಗಲೇ ಸಲ್ಲಿಸಿವೆ. ಇದನ್ನು ವಿಚಾರಣೆಗೆ ಅಂಗೀಕರಿಸಿದ್ದು, ಸದ್ಯದಲ್ಲೇ ಸಾರ್ವಜನಿಕವಾಗಿ ಅಹವಾಲುಗಳನ್ನು ಆಲಿಸಿ, ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ನಿಗದಿಪಡಿಸಿರುವ ವಿದ್ಯುತ್ ದರವನ್ನು ಜಾಸ್ತಿ ಮಾಡಿ, ರೈತರ ಕೃಷಿ ಪಂಪ್‍ಸೆಟ್?ಗಳಿಗೆ ನಿಗದಿಪಡಿಸಿರುವ ದರವನ್ನು ಕಡಿಮೆ ಮಾಡಬೇಕು ಎಂಬುದು ಎಸ್ಕಾಂಗಳ ಬೇಡಿಕೆಯಾಗಿದೆ.

ಏಕೆ ಈ ಬೇಡಿಕೆ? :
ಕೃಷಿ ಪಂಪ್‍ಸೆಟ್ ಗಳಿಗೆ ಪೂರೈಸುವ ಪ್ರತಿ ಯೂನಿಟ್ ವಿದ್ಯುತ್?ಗೆ 6.80 ಇದ್ದ ದರವನ್ನು ಆಯೋಗವು 8.25ಕ್ಕೆ ಹೆಚ್ಚಿಸಿತ್ತು. ಪಂಪ್‌ಸೆಟ್ ಗಳಿಗೆ ಉಚಿತವಾಗಿ ವಿದ್ಯುತ್ ನೀಡುವ ಕಾರಣ, ಇದರ ವೆಚ್ಚವನ್ನು ಸಹಾಯಧನದ ರೂಪದಲ್ಲಿ ಸರ್ಕಾರ ಎಸ್ಕಾಂಗಳಿಗೆ ತುಂಬಿಕೊಡಬೇಕು.ಕಳೆದ ವರ್ಷ ದರ ಪರಿಷ್ಕರಣೆ ಆಗುವ ಮುನ್ನ ಸರ್ಕಾರ ಸುಮಾರು 18 ಸಾವಿರ ಕೋಟಿ ಸಹಾಯಧನವನ್ನು ನೀಡುತ್ತಿತ್ತು. ಪರಿಷ್ಕರಣೆ ನಂತರ ಇದು ಸುಮಾರು 21 ಸಾವಿರ ಕೋಟಿಗೆ ಹೆಚ್ಚಾಗಿದೆ. ಇಷ್ಟೊಂದು ಹಣವನ್ನು ಸಹಾಯಧನದ ರೂಪದಲ್ಲಿ ನೀಡುವುದು ಕಷ್ಟ ಎಂಬ ಕಾರಣಕ್ಕಾಗಿ ಸರ್ಕಾರದ ಸೂಚನೆಯಂತೆ ಎಸ್ಕಾಂಗಳು ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿವೆ.

ಪಂಪ್‍ಸೆಟ್‍ಗಳಿಗೆ ಪೂರೈಕೆಯಾಗುವ ವಿದ್ಯುತ್ ದರವನ್ನು ಕಡಿಮೆ ಮಾಡಿ, ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳು ಇತ್ಯಾದಿಗಳಿಗೆ ಪೂರೈಸುವ ವಿದ್ಯುತ್ ದರವನ್ನು ಹೆಚ್ಚಿಸಬೇಕು ಎಂದು ಕೋರಲಾಗಿದೆ. ಇದನ್ನು ಕೆಇಆರ್‍ಸಿ ಒಪ್ಪಿದರೆ, ಸರ್ಕಾರಕ್ಕೆ ಸಹಾಯಧನದ ರೂಪದಲ್ಲಿ ನೀಡುವ ಹಣ ಸ್ವಲ್ಪಮಟ್ಟಿಗೆ ಉಳಿಯಲಿದೆ. ಆದರೆ, ಕೈಗಾರಿಕೆಗಳು, ಕಾರ್ಖಾನೆಗಳಿಗೆ ಹೊರೆಯಾಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

29 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

59 mins ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

1 hour ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

2 hours ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

11 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

14 hours ago