ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಆಗಸ್ಟ್.5ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳಕ್ಕೆ ಆಗ್ರಹ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವತೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್.5ರಂದು ಬೆಳಿಗ್ಗೆ 6ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ.
ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…
ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…
ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…