ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಒಂದು ವರ್ಷದ ಅವಧಿಯಲ್ಲೇ ಎರಡು ಬಾರಿ ಮದ್ಯ ದರ ಏರಿಕೆಯಾಗಿದೆ. ಇದೀಗ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೆ ಶಾಕ್ ನೀಡಿದ್ದು, ಬಿಯರ್ ದರವನ್ನು ಹೆಚ್ಚಳ ಮಾಡಿದೆ.
ಈ ಹಿನ್ನೆಲೆಯಲ್ಲಿ ಅಕ್ಟೋಬರ್.1ರಿಂದಲೇ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತೆಯಿದ್ದು, ಮದ್ಯ ಪ್ರಿಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಾರ್ ಮಾಲೀಕರು ಕೂಡ ಬೇಸರ ವ್ಯಕ್ತಪಡಿಸಿದ್ದು, ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಪರಿಷ್ಕರಣೆಯಾಗುತ್ತಿರುವುದಕ್ಕೆ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಬಿಯರ್ ಮಾರಾಟ ಹೆಚ್ಚಾಗಿದೆ. ಈ ಮಧ್ಯೆ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರ ಜೊತೆ ಮಾರಾಟಗಾರರಿಗೂ ಹೊಡೆತ ಬೀಳಲಿದೆ. ಬೆಲೆ ಏರಿಕೆ ಬದಲು ಇಳಿಕೆ ಬಗ್ಗೆ ಯೋಚನೆ ಮಾಡಬೇಕಿತ್ತು. ಆಗ ಎಲ್ಲರಿಗೂ ಅನುಕೂಲ ಆಗಿರುತ್ತಿತ್ತು ಎಂದಿದ್ದಾರೆ.