ರಾಜ್ಯ

ಬಿಯರ್‌ ಪ್ರಿಯರಿಗೆ ಮತ್ತೆ ಶಾಕ್:‌ ಅಕ್ಟೋಬರ್‌ 1ರಿಂದಲೇ ಪರಿಷ್ಕೃತ ದರ ಜಾರಿ?

ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ಮೇಲೆ ಶಾಕ್‌ ನೀಡುತ್ತಿದ್ದು, ಅಕ್ಟೋಬರ್‌ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಒಂದು ವರ್ಷದ ಅವಧಿಯಲ್ಲೇ ಎರಡು ಬಾರಿ ಮದ್ಯ ದರ ಏರಿಕೆಯಾಗಿದೆ. ಇದೀಗ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೆ ಶಾಕ್‌ ನೀಡಿದ್ದು, ಬಿಯರ್‌ ದರವನ್ನು ಹೆಚ್ಚಳ ಮಾಡಿದೆ.

ಈ ಹಿನ್ನೆಲೆಯಲ್ಲಿ ಅಕ್ಟೋಬರ್.‌1ರಿಂದಲೇ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತೆಯಿದ್ದು, ಮದ್ಯ ಪ್ರಿಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಾರ್‌ ಮಾಲೀಕರು ಕೂಡ ಬೇಸರ ವ್ಯಕ್ತಪಡಿಸಿದ್ದು, ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಪರಿಷ್ಕರಣೆಯಾಗುತ್ತಿರುವುದಕ್ಕೆ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಬಿಯರ್‌ ಮಾರಾಟ ಹೆಚ್ಚಾಗಿದೆ. ಈ ಮಧ್ಯೆ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರ ಜೊತೆ ಮಾರಾಟಗಾರರಿಗೂ ಹೊಡೆತ ಬೀಳಲಿದೆ. ಬೆಲೆ ಏರಿಕೆ ಬದಲು ಇಳಿಕೆ ಬಗ್ಗೆ ಯೋಚನೆ ಮಾಡಬೇಕಿತ್ತು. ಆಗ ಎಲ್ಲರಿಗೂ ಅನುಕೂಲ ಆಗಿರುತ್ತಿತ್ತು ಎಂದಿದ್ದಾರೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

14 mins ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

57 mins ago

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

3 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

3 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

3 hours ago