Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 21 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉತ್ತರಹಳ್ಳಿ ನಿವಾಸಿ ಶಿರೀಷಾ ಮೃತಪಟ್ಟ ದುರ್ದೈವಿ. ಬೈಕ್‌ನಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್‌ ತಗುಲಿದ ಪರಿಣಾಮ ಕೆಳಗೆ ಬಿದ್ದು ಯುವತಿಯ ಮೇಲೆ ಬಸ್‌ ಚಕ್ರ ಹರಿದಿದೆ. ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬಸ್‌ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ಚಾಲಕನ ಅಜಾಗರೂಕತೆಯಿಂದಲೇ ಘಟನೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!