ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆಬ್ರವರಿ.20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯಕ್ಕೆ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲಾ ಶಾಸಕರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಇನ್ನು ಕೇಂದ್ರದ ಶಿಸ್ತು ಸಮಿತಿ ಯತ್ನಾಳ್‌ರಿಗೆ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ಅದಾದ ಮೇಲೆ ಏನಾಗಿದೆ, ಏನಾಗುತ್ತಿದೆ ಎಂಬುದಕ್ಕೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದರು.
ಇನ್ನು ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದ ಅವರು, ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ ಸರ್ಕಾರ ಇದ್ದಾಗ ತೆರೆದ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ. ಅದರಿಂದ ಬಡ ಮಕ್ಕಳಿಗೂ ಅನುಕೂಲ ಆಗುತ್ತದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.
ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…
ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…
ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…
ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…
ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್…