ರಾಜ್ಯ

ರಾಜ್ಯಾಧ್ಯಕ್ಷ ಚುನಾವಣೆ ಬಳಿಕ ಎಲ್ಲ ಸಮಸ್ಯೆಗಳಿಗೆ ಉತ್ತರ: ಬಿವೈ ವಿಜಯೇಂದ್ರ

ಕಲಬುರಗಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಚುನಾವಣೆ ನಂತರ ರಾಜ್ಯ ಬಿಜೆಪಿ ಪಕ್ಷದಲ್ಲಿರುವ ಸಮಸ್ಯೆಗಳು, ಭಿನ್ನಮತಕ್ಕೆ ಉತ್ತರ ಸಿಗಲಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಇಂದು (ಜ.31) ಜಿಲ್ಲೆಯ ಸೇಡಂ ಬಳಿ ನಡೆಯುತ್ತಿರುವ ಏಳನೇ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಲ್ಲಿ ಇರುವ ಭಿನ್ನಮತದ ಬಗ್ಗೆ ಪಕ್ಷದ ಕಾರ್ಯಕರ್ತರಲ್ಲಿಯೂ ಬೇಸರವಿದೆ. ಅಧ್ಯಕ್ಷರ ಚುನಾವಣೆ ನಂತರ ಎಲ್ಲರೂ ಸಮಾಧಾನ ಆಗುತ್ತಾರೆ ಎಂದು ತಿಳಿಸಿದರು.

ರಾಜ್ಯ ಅಧ್ಯಕ್ಷರ ಚುನಾವಣೆ ಶೇ. 50ರಷ್ಟು ಘಟಕಗಳಿಗೆ ಅದ್ಯಕ್ಷರ ಆಯ್ಕೆ ನಡೆದಿರಬೇಕೆಂಬ ನಿಯಮವಿದೆ. ರಾಜ್ಯದಲ್ಲಿ ಪಕ್ಷದ 39 ಸಂಘಟನೆ ಘಟಕಗಳಿದ್ದು, ಈಗಾಗಲೇ 25 ಘಟಕಗಳ ಅಧ್ಯಕ್ಷರ ಆಯ್ಕೆ ಪೂರ್ಣಗೊಂಡಿದೆ. ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಹೈಕಮಾಂಡ್‌ ಅಧ್ಯಕ್ಷರ ಚುನಾವಣೆ ನೋಡಿಕೊಳ್ಳಲು ನೇಮಕ ಮಾಡಿದೆ. ಸದ್ಯದಲ್ಲೇ ಅವರು ರಾಜ್ಯಕ್ಕೆ ಬರಲಿದ್ದಾರೆ ಎಂದರು.

ಪಕ್ಷದ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಪ್ರಬಲ ಜಾತಿಗೆ ಮಾತ್ರ ಮಣೆ ಹಾಕಲಾಗಿದೆ ಎಂಬ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎರಡು ಮೂರು ಸಮಾಜ ನಂಬಿಕೊಂಡು ಪಕ್ಷ ಸಂಘಟನೆ ಮಾಡಲು ಸಾಧ್ಯವಿಲ್ಲ. ಸಮಾಜದ ಎಲ್ಲ ವರ್ಗದ ಜನರನ್ನು ಕರೆದುಕೊಂಡು ಪಕ್ಷ ಸಂಘಟನೆ ಮಾಡಬೇಕು. ಇದು ಬಿಜೆಪಿ ಪಕ್ಷದ ಪ್ರಮುಖ ಧ್ಯೇಯ ಕೂಡ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

46 mins ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…

1 hour ago

ಬಜೆಟ್‌ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರ ಪ್ರಮುಖ ಅಂಶಗಳಿವು.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…

1 hour ago

ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…

2 hours ago

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

2 hours ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…

2 hours ago