ರಾಜ್ಯ

ನಿಮ್ಮಿಂದ ಕನ್ನಡಿಗರು ನಿರೀಕ್ಷಿಸುತ್ತಿರುವ ಉತ್ತರಗಳಿವು: ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್‌ ಟಾಂಗ್‌

ಬೆಂಗಳೂರು: ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣಗಳ ಕುರಿತಾಗಿ ಕನ್ನಡಿಗರು ಸಿಎಂ ಸಿದ್ದರಾಮಯ್ಯ ಅವರಿಂದ ಏನೆಲ್ಲಾ ಉತ್ತರಗಳನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಆರ್.‌ ಅಶೋಕ್‌ ವಿವರಿಸಿದ್ದು, ಈ ಸಂಬಂಧ ಎಕ್ಸ್‌ನಲ್ಲಿ ಪ್ರಶ್ನಾವಳಿ ಸಿದ್ದಪಡಿಸಿ ಪೊಸ್ಟ್‌ ಮಾಡಿದ್ದಾರೆ.

ಮೂಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಂದ ನಿರೀಕ್ಷಿಸುತ್ತಿರುವ ಉತ್ತರಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಮೂಡಾದಿಂದ ಪಡೆದಿರುವ ಸೈಟುಗಳ ಅವರ ತವರು ಮನೆಯಿಂದ ಪಡೆದ ಜಮೀನಿನ ಬದಲಾಗಿ ಪಡೆಸಿರುವ ನಿವೇಶನಗಳು ಎಂದು ಸಿದ್ದರಾಮಯ್ಯನವರು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆದರೆ ಸಿಎಂ ಸಿದ್ದರಾಮಯ್ಯನವರ ಬಾಮೈದ ಬಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಅವರು ಆ ಭೂಮಿ ಖರೀದಿಸಿರುವ ಬಗ್ಗೆಯೇ ಸಾಕಷ್ಟು ಅನುಮಾನಗಳಿವೆ.

1.) ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರು ಸದರಿ ಜಮೀನು ಖರೀದಿಸಿದ್ದು ದೇವರಾಜ ಅವರಿಂದ ಎಂದು ಹೇಳುತ್ತಾರೆ. ಆದರೆ ಮಲ್ಲಿಕಾರ್ಜುನ ಸ್ವಾಮಿ ಅವರು ಭೂಮಿ ಖರೀದಿಸಿದಾಗ ದೇವರಾಜ ಅವರ ಹೆಸರಿನಲ್ಲಿ encumebrance certificate ಇರಲಿಲ್ಲ ಎನ್ನುವುದು ಸತ್ಯವಲ್ಲವೇ?

2.) 1968ರಲ್ಲೇ ದೇವರಾಜ ಅವರು ಆ ಜಮೀನನ್ನು ಮೈಲಾರಯ್ಯ ಮತ್ತು ಕುಟುಂಬದವರಿಗೆ ಮಾರಿದ್ದು, ನಂತರ ನಕಲಿ ದಾಖಲೆ ಸೃಷ್ಟಿಸಿ, ತಮ್ಮ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಮಾರಿದ್ದು ಸತ್ಯವಲ್ಲವೇ ಸಿಎಂ ಸಿದ್ದರಾಮಯ್ಯನವರೇ?

3.) ಜಮೀನಿನ ಮಾಲೀಕತ್ವದ ಬಗ್ಗೆ ಇಷ್ಟು ಗೊಂದಲವಿದ್ದರೂ ತಮ್ಮ ಬಾಮೈದ ಜಮೀನು ಖರೀದಿಸಿದ್ದು ಯಾಕೆ? ಜಮೀನು ಖರೀದಿಸುವಾಗ ಸ್ಥಳವನ್ನ ಪರಿಶೀಲನೆ ಮಾಡದೆಯೇ ಖರೀದಿ ಮಾಡಿದರಾ? ಅಥವಾ ಆ ವೇಳೆಗೆ ಅಲ್ಲಿ ಆಗಾಗಲೇ ಬಡಾವಣೆ ಅಭಿವೃದ್ಧಿ ಆಗಿತ್ತು ಅಂತ ಜಮೀನು ನೋಡದೆಯೇ ಖರೀದಿ ಮಾಡಿದರಾ?

4.) 2003ರಲ್ಲೆ ಮೂಡಾ ನಿವೇಶನ ಮಾಡಿ ಕ್ರಯಕ್ಕೆ ಹಂಚಿಕೆ ಮಾಡಿದ ಮೇಲೆ 2005ರಲ್ಲಿ ಅದೇ ಜಾಗವನ್ನ ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಿ ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆ ಮಾಡಲು ವರದಿ ನೀಡಲು ಹೇಗೆ ಸಾಧ್ಯ?

5.) 2010 ರಲ್ಲಿ ಅರಿಶಿನ-ಕುಂಕುಮ ರೂಪದಲ್ಲಿ ತಮ್ಮ ಪತ್ನಿ ಪಾರ್ವತಿ ಅವರಿಗೆ ಜಮೀನು ಸಿಕ್ಕಾಗ ಅವರು ಸ್ಥಳಕ್ಕೆ ಭೇಟಿ ನೀಡಿರಲಿಲ್ಲವೇ?

ವಾಲ್ಮೀಕಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಮೊತ್ತದ ಹಗರಣಕ್ಕೆ ಸಂಬಂಧಿಸಿದಂತೆಯೂ ಸಿಎಂ ಅವರಿಂದ ಕನ್ನಡಿಗರು ನಿರೀಕ್ಷಿಸುತ್ತಿರುವ ಉತ್ತರಗಳೇನು ಎಂಬುದನ್ನು ಸಹ ಪ್ರಕಟಿಸಿದ್ದಾರೆ.

1.) ವಾಲ್ಮೀಕಿ ನಿಗಮಕ್ಕೆ ಸೇರಿದ ವಸಂತ ನಗರದ ಯೂನಿಯನ್ ಬ್ಯಾಂಕ್ ಶಾಖೆಯಿಂದ ಎಂಜಿ ರಸ್ತೆ ಶಾಖೆಗೆ ಅಕ್ರಮವಾಗಿ ದೊಡ್ಡ ಮೊತ್ತ ವರ್ಗಾವಣೆಯಾಯದಾಗ ಅದು ಇಲಾಖೆಯ ಗಮನಕ್ಕೆ ಬರಲಿಲ್ಲವೇಕೆ?

2.) ಅಷ್ಟು ದೊಡ್ಡ ಮೊತ್ತ ವರ್ಗಾವಣೆ ಆದರೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಪರಿಶೀಲನೆ ನಡೆಸಿರಲಿಲ್ಲವೇ? ಅಥವಾ ತಮ್ಮ ನಿರ್ದೇಶನದಂತೆ ಸುಮ್ಮನಿದ್ದರೆ?

3.) ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನಡೆಸುವ ಸಭೆಯಲ್ಲಿ ಈ ಅಕ್ರಮ ಕಣ್ಣಿಗೆ ಬೀಳಲಿಲ್ಲವೇ? ಅಥವಾ ಕಂಡೂ ಕಾಣದ ಹಾಗೆ ಜಾಣ ಕುರುಡುತನ ಪ್ರದರ್ಶನ ಮಾಡಲಾಯಿತೋ?

4.) ಅಕ್ರಮ ಹಣ ವರ್ಗಾವಣೆಯ ಮಾಹಿತಿ ಎನ್ ಟಿಟಿ ಮಾಡ್ಯೂಲ್ ಗೆ ಸಿಗದೆ ಇರಲಿ ಎನ್ನುವ ದುರುದ್ದೇಶದಿಂದ ಎಂಜಿ ರಸ್ತೆ ಖಾತೆಗೆ ಹಣ ವರ್ಗಾವಣೆ ಮಾಡಿದ್ದು ನಿಜವಲ್ಲವೇ?

5.) ಎನ್ ಟಿಟಿ ಮಾಡ್ಯೂಲ್ ಬಗ್ಗೆ ಸಂಪೂರ್ಣ ಮಾಹಿತಿ ಇದ್ದವರಿಂದ ಮಾತ್ರ ಇಷ್ಟು ಪೂರ್ವ ನಿಯೋಜಿತವಾಗಿ ಅಕ್ರಮ ಮಾಡಲು ಸಾಧ್ಯ. ಅಂದಮೇಲೆ ಹಣಕಾಸು ಇಲಾಖೆಯ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವುದು ಸತ್ಯವಲ್ಲವೇ?

ಹೀಗೆ ಈ ಎಲ್ಲಾ ಪ್ರಶ್ನೆಗಳಿಗೂ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ನೀಡಬೇಕು ಎಂದು ಆರ್.ಅಶೋಕ್‌ ಎಕ್ಸ್‌ ನಲ್ಲಿ ಬರೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…

27 mins ago

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್‌…

48 mins ago

ಮೈಸೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ: ದೇಗುಲಗಳಲ್ಲಿ ಭಕ್ತಸಾಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…

1 hour ago

ಹೊಸ ವರ್ಷಾಚರಣೆ: ರಾಜ್ಯದೆಲ್ಲೆಡೆ ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…

2 hours ago

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನ: ವಿಜಯೇಂದ್ರ ವಾಗ್ದಾಳಿ

ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು…

2 hours ago

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಕಡಿವಾಣ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…

3 hours ago