ರಾಜ್ಯ

ದಕ್ಷಿಣ ಕನ್ನಡದಲ್ಲಿ ಆಂಟಿ ಕಮ್ಯುನಲ್‌ ವಿಂಗ್‌ ಜಾರಿಗೆ ಆದೇಶ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ ಹಾಗೂ ಕೋಮು ಸೌಹಾರ್ದತೆ ಕದಡುವ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಆಂಟಿ ಕಮ್ಯುನಲ್‌ ವಿಂಗ್‌ ಜಾರಿಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಈಗಾಗಲೇ ಆಂಟಿ ಕಮ್ಯುನಲ್‌ ಟಾಸ್ಕ್‌ಫೋರ್ಸ್‌ ರಚನೆಯಾಗಿತ್ತು. ಆಂಟಿ ಕಮ್ಯುನಲ್‌ ವಿಂಗ್‌ ಜಾರಿಗೆ ಆದೇಶ ನೀಡಲಾಗಿದೆ. ಪ್ರತಿಬಾರಿ ಘಟನೆ ನಡೆದಾಗಲೂ ಕಣ್ಮುಚ್ಚಿ ಕುಳಿತುಕೊಳ್ಳಲು ಆಗಲ್ಲ. ಕಳೆದ ಬಾರಿ ಹತ್ಯೆ ಘಟನೆ ನಡೆದಾಗ ನಾನು ಅಲ್ಲಿಗೆ ಹೋಗಿದ್ದೆ. ಆಗಲೇ ಆಂಟಿ ಕಮ್ಯುನಲ್‌ ಟಾಸ್ಕ್‌ಫೋರ್ಸ್‌ ರಚನೆ ಬಗ್ಗೆ ಹೇಳಿದ್ದೆ. ಇದೀಗ ಆಂಟಿ ಕಮ್ಯುನಲ್‌ ವಿಂಗ್‌ ತಕ್ಷಣ ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮಂಗಳೂರಿನಲ್ಲಿ ನಡೆದಿರುವ ಘಟನೆಯಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕೋಮುಗಲಭೆ, ಕಾನೂನು ಸುವ್ಯವಸ್ಥೆ ಹದಗೆಡಿಸುವ ಘಟನೆ ನಡೆದಲ್ಲಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

6 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

6 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

7 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

7 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

7 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

8 hours ago