Categories: ರಾಜ್ಯ

ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು. ಸಂವಿಧಾನ-ಪ್ರಜಾಪ್ರಭುತ್ವ-ಜಾತ್ಯತೀತತೆ ಬಗ್ಗೆ ಪ್ರತಿಯೊಬ್ಬರೂ ಸ್ಪಷ್ಟತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಉದ್ಘಾಟಿಸಿ, ಕನಕ ಶ್ರೀ ಪ್ರಶಸ್ತಿ ಪ್ರದಾನ ಮಾಡಿ ಸಮಗ್ರ ತತ್ವಪದ ಯೋಜನೆಯ 18 ಸಂಪುಟಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕನಕದಾಸರ 500ನೇ ಜಯಂತೋತ್ಸವವನ್ನು ಆಚರಿಸುವ ಅವಕಾಶ ನನಗೆ ಸಿಕ್ಕಿತ್ತು. ಆ ಸಂದರ್ಭದಲ್ಲಿ ಕನಕದಾಸರ ಕೀರ್ತನೆಗಳನ್ನು ಸುಲಭವಾಗಿ ಜನರ ಕೈಗೆ ತಲುಪಿಸುವ ಕಾರ್ಯವನ್ನು ಮಾಡಲಾಗಿತ್ತು ಎಂದು ಸ್ಮರಿಸಿದರು.

ಕನಕಶ್ರೀ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಕನಕಶ್ರೀ ಪ್ರಶಸ್ತಿಗೆ ಜಾತಿ-ಧರ್ಮ ಮುಖ್ಯ ಅಲ್ಲ. ಕನಕದಾಸರ ಸಾಮಾಜಿಕ ಸಂದೇಶದ ಮೇಲೆ ಕೆಲಸ ಮಾಡುವುದಷ್ಟೆ ಮುಖ್ಯ ಎಂದರು.

ಬಸವಾದಿ ಶರಣರು, ಕನಕದಾಸರು ಇಬ್ಬರೂ ಮನುಷ್ಯರನ್ನು ವಿಭಜಿಸುವ ಜಾತಿ-ಧರ್ಮದ ತಾರತಮ್ಯವನ್ನು ವಿರೋಧಿಸಿದ್ದರು. ವಚನ ಚಳವಳಿಗೂ ಮೊದಲು ಜನರಿಗೆ ಅರ್ಥ ಆಗದ ಭಾಷೆಯಲ್ಲಿ ಧರ್ಮ‌ ಪ್ರಚಾರ ನಡೆಯುತ್ತಿತ್ತು. ಜನರಿಗೆ ಅರ್ಥವಾಗದ ಸಂಸ್ಕೃತ ಶ್ಲೋಕಗಳನ್ನು ಮುಟ್ಟದ ಬಸವಾದಿ ಶರಣರು ಜನರಿಗೆ ಅರ್ಥವಾಗುವ ಜನರ ಭಾಷೆಯಲ್ಲೇ ಅತ್ಯಂತ ಸರಳವಾಗಿ ಮಾನವೀಯ ಧರ್ಮವನ್ನು ಹೇಳಿದರು. ಮನುಷ್ಯ ನಿರ್ಮಿತ ಜಾತಿ ತಾರತಮ್ಯವನ್ನು, ಧಾರ್ಮಿಕ ತಾರತಮ್ಯವನ್ನು ಅಳಿಸಲು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಮುನ್ನಡೆಸಿದ ಮಾನವೀಯ ಧರ್ಮವನ್ನು 15 ನೇ ಶತಮಾನದಲ್ಲಿ ಕನಕದಾಸರು ಮುಂದುವರೆಸಿದರು.

ಬುದ್ದ, ಬಸವ, ಕನಕದಾಸರು, ಅಂಬೇಡ್ಕರ್ ಅವರ ಆಶಯಗಳೆಲ್ಲಾ ಒಂದೇ ಆಗಿದ್ದವು. ಜಾತಿ, ಧರ್ಮದ ಹೆಸರಿನಲ್ಲಿ ನಡೆಯುವ ಮನುಷ್ಯ ತಾರತಮ್ಯಗಳನ್ನು ನಿವಾರಿಸಲು ಶ್ರಮಿಸಿದರು ಎಂದು ವಿವರಿಸಿದರು.

ವಿದ್ಯಾವಂತರಾದಷ್ಟೂ ಜಾತಿವಾದಿಗಳಾದರೆ ಆ ವಿದ್ಯೆಗೆ ಗೌರವ ಬರುತ್ತದಾ? ಸಂವಿಧಾನವನ್ನು ವಿರೋಧಿಸುವವರೂ ಈಗ ತಲೆ ಎತ್ತಿದ್ದಾರೆ. ಸಂವಿಧಾನ ವಿರೋಧಿಗಳು ನಿಜವಾದ ಮನುಷ್ಯ ವಿರೋಧಿಗಳು ಎಂದರು.

ಮನುಷ್ಯ ಮನುಷ್ಯರನ್ನು ಜಾತಿ, ಧರ್ಮದ ಹೆಸರಲ್ಲಿ, ಮೇಲು-ಕೀಳು ಎನ್ನುವ ತಾರತಮ್ಯವನ್ನು ತ್ಯಜಿಸಿ ಮನುಷ್ಯರನ್ನು ಪ್ರೀತಿಸುವುದೇ ಕನಕದಾಸರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದರು.

ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಸಿದ್ದರಾಮಾನಂದ ಸ್ವಾಮಿಗಳ‌ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕರಾದ ಬಂಜಗೆರೆ ಜಯಪ್ರಕಾಶ್ ಅವರು ವಿಶೇಷ ಉಪನ್ಯಾಸ ನೀಡಿದರು. ಸಚಿವರಾದ ಶಿವರಾಜ್ ತಂಗಡಗಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇಲಾಖೆ ಪ್ರಕಟಣೆಗಳಿಗೆ ಶೇ50 ರಿಯಾಯ್ತಿ ನೀಡಿ: ಸಿಎಂ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವ ಎಲ್ಲಾ ಅಕಾಡೆಮಿಗಳು ಮತ್ತು ಪ್ರಾಧಿಕಾರಿಗಳು ಪ್ರಕಟಿಸುವ ಪುಸ್ತಕಗಳನ್ನು ವಿಶೇಷ ಸಂದರ್ಭಗಳಲ್ಲಿ ಶೇ50 ರಷ್ಟು ರಿಯಾಯ್ತಿ ದರದಲ್ಲಿ ಮಾರಾಟ ಮಾಡುವಂತೆ ಇದೇ ಸಂದರ್ಭದಲ್ಲಿ ಘೋಷಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

4 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

4 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

4 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

5 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

5 hours ago