Mysore
20
overcast clouds
Light
Dark

ಅತ್ಯಾಚಾರ ವಿರೋಧಿ ಮಸೂದೆ ಮಂಡಿಸಿದ ಪಶ್ಚಿಮ ಬಂಗಾಳ ಸರ್ಕಾರ

ಕೋಲ್ಕತ್ತಾ: ಆರ್‌ಜಿಕರ್‌ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶಾದ್ಯಂತ ಕಿಚ್ಚು ಹೊತ್ತಿಸಿರುವ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎಚ್ಚೆತ್ತುಕೊಂಡಿದೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎರಡು ದಿನಗಳ ವಿಶೇಷ ಅಧಿವೇಶನ ಕರೆದಿದ್ದು, ಅತ್ಯಾಚಾರ ವಿರೋಧಿ ಮಸೂದೆಯನ್ನು ಮಂಡಿಸಿದೆ.

ರಾಜ್ಯ ಕಾನೂನು ಸಚಿವ ಮೊಲೊಯ್‌ ಘಾಟಕ್‌ ಅವರು, ಅತ್ಯಾಚಾರ ವಿರೋಧಿ ಮಸೂದೆಯನ್ನು ಮಂಡಿಸಿದರು. ಮಸೂದೆಯಲ್ಲಿ ಅತ್ಯಾಚಾರ ಮತು ಬಲಿಪಶುವಿನ ಮರಣದ ತಪ್ಪಿತಸ್ಥರಿಗೆ ಮರಣ ದಂಡನೆ ನೀಡಲು ಅವಕಾಶವಿದೆ.

ಇದರ ಜೊತೆಗೆ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ತಪ್ಪಿತಸ್ಥರಿಗೆ ಜಾಮೀನು ರಹಿತ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಸದನದಲ್ಲಿ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ ಅವರು, ಈ ಮಸೂದೆಯನ್ನು ಐತಿಹಾಸಿಕ ಎಂದು ಬಣ್ಣಿಸಿ, ಅತ್ಯಾಚಾರ ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು.

ಬಳಿಕ ಮಾತನಾಡಿದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು, ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯಪಾಲ ಸಿವಿ ಆನಂದ ಬೋಸ್‌ರನ್ನು ಒತ್ತಾಯಿಸುವಂತೆ ಹೇಳಿದರು.