ಕೋಲ್ಕತ್ತಾ: ಆರ್‌ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶಾದ್ಯಂತ ಕಿಚ್ಚು ಹೊತ್ತಿಸಿರುವ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎಚ್ಚೆತ್ತುಕೊಂಡಿದೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎರಡು ದಿನಗಳ ವಿಶೇಷ ಅಧಿವೇಶನ ಕರೆದಿದ್ದು, ಅತ್ಯಾಚಾರ ವಿರೋಧಿ ಮಸೂದೆಯನ್ನು ಮಂಡಿಸಿದೆ.
ರಾಜ್ಯ ಕಾನೂನು ಸಚಿವ ಮೊಲೊಯ್ ಘಾಟಕ್ ಅವರು, ಅತ್ಯಾಚಾರ ವಿರೋಧಿ ಮಸೂದೆಯನ್ನು ಮಂಡಿಸಿದರು. ಮಸೂದೆಯಲ್ಲಿ ಅತ್ಯಾಚಾರ ಮತು ಬಲಿಪಶುವಿನ ಮರಣದ ತಪ್ಪಿತಸ್ಥರಿಗೆ ಮರಣ ದಂಡನೆ ನೀಡಲು ಅವಕಾಶವಿದೆ.
ಇದರ ಜೊತೆಗೆ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ತಪ್ಪಿತಸ್ಥರಿಗೆ ಜಾಮೀನು ರಹಿತ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.
ಸದನದಲ್ಲಿ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ ಅವರು, ಈ ಮಸೂದೆಯನ್ನು ಐತಿಹಾಸಿಕ ಎಂದು ಬಣ್ಣಿಸಿ, ಅತ್ಯಾಚಾರ ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು.
ಬಳಿಕ ಮಾತನಾಡಿದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು, ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯಪಾಲ ಸಿವಿ ಆನಂದ ಬೋಸ್‌ರನ್ನು ಒತ್ತಾಯಿಸುವಂತೆ ಹೇಳಿದರು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…