ಮಂಗಳೂರು: ವಕ್ಫ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 150 ಕೋಟಿ ಆಫರ್ ಮಾಡಿದ್ದರು ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸುಳ್ಳು ಎಂದು ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ನವರೇ ಕೋಟಿ ಕೋಟಿ ಲಂಚ ನೀಡುವ ಆಫರ್ ನೀಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.
ಇನ್ನು ಸಿಎಂ ಸಿದ್ದರಾಮಯ್ಯ ಅವರು ಈಗ ಮಾಡಿರುವ ಆರೋಪ ಸುಳ್ಳು. ವಿಜಯೇಂದ್ರ ಯಾವುದೇ ರೀತಿಯ ಹಣದ ಬೇಡಿಕೆ ಇಟ್ಟಿಲ್ಲ. ಸರ್ಕಾರ ತನಿಖೆ ಮಾಡಬೇಕೆಂದು ವಿಜಯೇಂದ್ರ ಅವರನ್ನು ಒತ್ತಾಯಿಸಿದ್ದೆ. ಆದರೆ ಹಣದ ಬೇಡಿಕೆ ಇಟ್ಟಿಲ್ಲ. ಈ ವರದಿಯನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ ಎಲ್ಲರ ವಿರುದ್ಧ ಕಿಡಿಕಾರಿದ್ದು ಸತ್ಯ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಹೇಳಿದ ರೀತಿ ಸಿಬಿಐಗೆ ವಹಿಸಲಿ. ಆಗ ಎಲ್ಲವೂ ಹೊರ ಬರುತ್ತದೆ ಎಂದು ಆಗ್ರಹಿಸಿದರು.
ಈ ವರದಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಬಹಳಷ್ಟು ಪತ್ರ ಬರೆದಿದ್ದೇನೆ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖಾ ಸಂಸ್ಥೆಗೆ ಹಸ್ತಾಂತರಿಸಬೇಕು ಎಂದು ಕೇಳಿಕೊಂಡಿದ್ದೆ ಅಷ್ಟೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತೂ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಇದ್ದರೆ ಆ ಸಮುದಾಯಕ್ಕೆ ಏನಾದರೂ ಮಾಡಬೇಕೆಂಬ ಮನಸ್ಸಿದ್ದರೆ ನಾನು ಕೊಟ್ಟ ವರದಿಯನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಲಿ ಎಂದು ಒತ್ತಾಯಿಸಿದರು.
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…