Mysore
22
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಖ್ಯಾತ ನಿರೂಪಕಿ ಅಪರ್ಣಾ ನಿಧನ ; ಸಿಎಂ ಸೇರಿದಂತೆ ಗಣ್ಯರಿಂದ ಸಂತಾಪ ಸೂಚನೆ

ಬೆಂಗಳೂರು : ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಖ್ಯಾತ ನಿರೂಪಕಿ ಅಪರ್ಣಾ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ಕನ್ನಡ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮ ಅಗಲಿರುವುದು ದುಃಖದ  ಸಂಗತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಮ್ಮ ಎಕ್ಸ್‌ ನಲ್ಲಿ ಸಂತಾಪ ಸೂಚಿಸಿದ್ದಾರೆ.

ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಜಮೀರ್‌ ಅಹಮದ್‌ ಖಾನ್‌, ಸಂತೋಷ್‌ ಲಾಡ್‌ ಡಿಕೆ ಶಿವಕುಮಾರ್‌ ಸೇರಿದಂತೆ ಇತರರು ಕೂಡ ತಮ್ಮ ಎಕ್ಸ್‌ ಖಾತೆಯಲ್ಲಿ, ಬಹುಮುಖ ಪ್ರತಿಭೆ ಅಪರ್ಣಾ ನಿಧನ ಕಿರುತೆರೆ ಮತ್ತು ಚಲನಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಅಪರ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ ಪಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Tags: