ಬೆಂಗಳೂರು : ಕ್ಯಾನ್ಸರ್ ನಿಂದ ಬಳಲುತ್ತಿದ್ದ ಖ್ಯಾತ ನಿರೂಪಕಿ ಅಪರ್ಣಾ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ಕನ್ನಡ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮ ಅಗಲಿರುವುದು ದುಃಖದ ಸಂಗತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಮ್ಮ ಎಕ್ಸ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಜಮೀರ್ ಅಹಮದ್ ಖಾನ್, ಸಂತೋಷ್ ಲಾಡ್ ಡಿಕೆ ಶಿವಕುಮಾರ್ ಸೇರಿದಂತೆ ಇತರರು ಕೂಡ ತಮ್ಮ ಎಕ್ಸ್ ಖಾತೆಯಲ್ಲಿ, ಬಹುಮುಖ ಪ್ರತಿಭೆ ಅಪರ್ಣಾ ನಿಧನ ಕಿರುತೆರೆ ಮತ್ತು ಚಲನಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಅಪರ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ ಪಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…