ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.
ಬುಧವಾರ ಪ್ರಾಸಿಕ್ಯೂಷನ್ ಪರವಾಗಿ ವಕೀಲರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ರದ್ದು ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಡಿ.6 ಅಥವಾ ಡಿ.9 ರಂದು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಜಾಮೀನು ಮಂಜೂರು ಬಳಿಕ ದರ್ಶನ್ ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ನೀಡಿತ್ತು. ಅನುಮತಿ ನೀಡಿದ ಬೆನ್ನಲಲೇ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಮೂಲಗಳಿ ತಿಳಿಸಿವೆ.