ರಾಜ್ಯ

ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಬುಧವಾರ ಪ್ರಾಸಿಕ್ಯೂಷನ್‌ ಪರವಾಗಿ ವಕೀಲರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ರದ್ದು ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಡಿ.6 ಅಥವಾ ಡಿ.9 ರಂದು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಜಾಮೀನು ಮಂಜೂರು ಬಳಿಕ ದರ್ಶನ್‌ ಬೆಂಗಳೂರಿನ ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ನೀಡಿತ್ತು. ಅನುಮತಿ ನೀಡಿದ ಬೆನ್ನಲಲೇ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಮೂಲಗಳಿ ತಿಳಿಸಿವೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

51 mins ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

57 mins ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

1 hour ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

1 hour ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

1 hour ago

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

2 hours ago