ಬೆಂಗಳೂರು: ಪತ್ರಿಕೋದ್ಯಮದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗೆ ಭಾರತೀಯ ವಿದ್ಯಾಭವನ ಸಂಸ್ಥೆಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಇಲ್ಲಿನ ಪತ್ರಿಕೋದ್ಯಮದ ಡಿಪ್ಲೊಮಾ ಕೋರ್ಸ್ ಒಂದು ವರ್ಷದ ಅವಧಿಯಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಕ್ಷೇತ್ರದ ಪರಿಣಿತರಿಂದ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಹಾಗೂ ಕಾರ್ಪೋರೇಟ್ ಮಾಧ್ಯಮ ವಿಭಾಗದಲ್ಲಿ ತರಬೇತಿ ನೀಡಲಾಗುವುದರ ಜೊತೆಗೆ ಪತ್ರಿಕೋದ್ಯಮದ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತದೆ ಎಂದು ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್ ಸುರೇಶ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದ ಕೇಂದ್ರ ಕಚೇರಿ ಅಥವಾ ದೂ.ಸಂ 9538181140 ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.