ರಾಜ್ಯ

ಪತ್ರಿಕೋದ್ಯಮ ಕೋರ್ಸ್‌ಗೆ ಅರ್ಜಿ ಆಹ್ವಾನ

ಬೆಂಗಳೂರು: ಪತ್ರಿಕೋದ್ಯಮದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗೆ ಭಾರತೀಯ ವಿದ್ಯಾಭವನ ಸಂಸ್ಥೆಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಇಲ್ಲಿನ ಪತ್ರಿಕೋದ್ಯಮದ ಡಿಪ್ಲೊಮಾ ಕೋರ್ಸ್‌ ಒಂದು ವರ್ಷದ ಅವಧಿಯಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಕ್ಷೇತ್ರದ ಪರಿಣಿತರಿಂದ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಹಾಗೂ ಕಾರ್ಪೋರೇಟ್‌ ಮಾಧ್ಯಮ ವಿಭಾಗದಲ್ಲಿ ತರಬೇತಿ ನೀಡಲಾಗುವುದರ ಜೊತೆಗೆ ಪತ್ರಿಕೋದ್ಯಮದ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತದೆ ಎಂದು ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್‌ ಸುರೇಶ್‌ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದ ಕೇಂದ್ರ ಕಚೇರಿ ಅಥವಾ ದೂ.ಸಂ 9538181140 ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

7 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

13 hours ago