aword
ಬೆಂಗಳೂರು : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.
ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪøಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.
ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು – 560 001 ಅಥವಾ ಇ – ಮೇಲ್ ವಿಳಾಸ informationdiprawards@gmail.com ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…