ರಾಜ್ಯ

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪøಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.

ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು – 560 001 ಅಥವಾ ಇ – ಮೇಲ್ ವಿಳಾಸ informationdiprawards@gmail.com ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

5 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

13 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

13 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

14 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

14 hours ago