ಬೆಂಗಳೂರು: ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಹಣವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಬಳಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್‌ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರೂ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ 130 ಕೋಟಿ ರೂ ಅನುದಾನ ನೀಡಿರುವ ಕಾಮಗಾರಿಗಳನ್ನು ಬೇಗನೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಈ ವೇಳೆ ಸಚಿವ ಶರಣ ಪ್ರಕಾಶ ಪಾಟೀಲ್ ಮಾತನಾಡಿ, 2024-25ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 4331 ಕೋಟಿ ರೂ ಅನುದಾನದಲ್ಲಿ 3099 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ 3005 ಕೋಟಿ ವೆಚ್ಚ ಅಗಿದ್ದು, ಶೇಡಕಾ 96.97 ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
2023-24ನೇ ಸಾಲಿನಲ್ಲಿ ಅನುಮೋದನೆಯಾಗಿರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಗದಗ, ಕೊಪ್ಪಳ, ಕಾರವಾರ, ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ ಆಸ್ಪತ್ರೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕ್ಯಾನ್ಸರ್ ಹೆಚ್ಚಳವಾಗಲು ಕಾರಣ ಕುರಿತು ಸುದೀರ್ಘ ಅಧ್ಯಯನ ನಡೆಸಬೇಕು. ಕ್ಯಾನ್ಸರ್‌ಗೆ ಅಂತರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆಯನ್ನು ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…