ರಾಜ್ಯ

ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜೀವ್‌ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಹಣವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಬಳಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರೂ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ 130 ಕೋಟಿ ರೂ ಅನುದಾನ ನೀಡಿರುವ ಕಾಮಗಾರಿಗಳನ್ನು ಬೇಗನೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಈ ವೇಳೆ ಸಚಿವ ಶರಣ ಪ್ರಕಾಶ ಪಾಟೀಲ್‌ ಮಾತನಾಡಿ, 2024-25ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 4331 ಕೋಟಿ ರೂ ಅನುದಾನದಲ್ಲಿ 3099 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ 3005 ಕೋಟಿ ವೆಚ್ಚ ಅಗಿದ್ದು, ಶೇಡಕಾ 96.97 ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

2023-24ನೇ ಸಾಲಿನಲ್ಲಿ ಅನುಮೋದನೆಯಾಗಿರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಗದಗ, ಕೊಪ್ಪಳ, ಕಾರವಾರ, ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ ಆಸ್ಪತ್ರೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕ್ಯಾನ್ಸರ್‌ ಹೆಚ್ಚಳವಾಗಲು ಕಾರಣ ಕುರಿತು ಸುದೀರ್ಘ ಅಧ್ಯಯನ ನಡೆಸಬೇಕು. ಕ್ಯಾನ್ಸರ್‌ಗೆ ಅಂತರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆಯನ್ನು ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

19 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

19 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago