Mysore
29
clear sky

Social Media

ಶನಿವಾರ, 31 ಜನವರಿ 2026
Light
Dark

ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕ : ಯಾರಿಗೆಲ್ಲಾ ಅವಕಾಶ?

bjp

ಬೆಂಗಳೂರು : ಕರ್ನಾಟಕ ಬಿಜೆಪಿ ವತಿಯಿಂದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಚುನಾವಣಾ ಅಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ.

ಪಕ್ಷ ನೇಮಿಸಿರುವ ರಾಜ್ಯ ಚುನಾವಣಾಧಿಕಾರಿಯಾಗಿ ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿರುವ ಕ್ಯಾ. ಗಣೇಶ್ ಕಾರ್ಣಿಕ್, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ

ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ
ಹಾಸನ – ಸಿದ್ದೇಶ್ ನಾಗೇಂದ್ರ
ಕೊಡಗು – ರವಿ ಕಾಳಪ್ಪ
ಉಡುಪಿ – ಕುತ್ಯಾರು ನವೀನ್ ಶೆಟ್ಟಿ
ದಾವಣಗೆರೆ – ಎನ್ ರಾಜಶೇಖರ
ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ
ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ
ತುಮಕೂರು – ಎಚ್.ಎಸ್. ರವಿಕುಮಾರ್ (ಹೆಬ್ಬಾಕ)
ಮಧುಗಿರಿ – ಚಿದಾನಂದ ಗೌಡ
ಚಿಕ್ಕಬಳ್ಳಾಪುರ – ಎಸ್.ವಿ. ರಾಮಚಂದ್ರ ಗೌಡ (ಸೀಕಲ್)

Tags:
error: Content is protected !!