ಬೆಂಗಳೂರು: ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಿಸಿದೆ. ಈ ಪೈಕಿ 9 ಜಿಲ್ಲೆಗಳಲ್ಲಿ ಹಾಲಿ ಅಧ್ಯಕ್ಷರುಗಳನ್ನೇ ಮುಂದುವರಿಸಲಾಗಿದೆ.
ಈ ಬಗ್ಗೆ ರಾಜ್ಯಾಧ್ಯಕ್ಷ ಬಿ . ವೈ ವಿಜಯೇಂದ್ರ ಪ್ರಕಟಣೆ ಹೊರಡಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಪಕ್ಷದನಿಷ್ಠಾವಂತರನ್ನೂ ಗುರುತಿಸಿ ಜವಾಬ್ದಾರಿ ವಹಿಸಿದ್ದಾರೆ.
ಹಾಲಿ ಶಾಸಕರಾದ ಡಾ.ಶಿವರಾಜ್ ಪಾಟೀಲ್ ಅವರಿಗೆ ರಾಯಚೂರು ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರಿಗೆ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಮಾಜಿ ಶಾಸಕರಾದ ಎಲ್.ನಾಗೇಂದ್ರ ಅವರಿಗೆ ಮೈಸೂರು ನಗರ ಜಿಲ್ಲಾಧ್ಯಕ್ಷ,ಸಿ.ಎಸ್.ನಿರಂಜನ್‌ಕುಮಾರ್ ಅವರಿಗೆ ಚಾಮರಾಜ ನಗರ ಜಿಲ್ಲಾಧ್ಯಕ್ಷ ಹಾಗೂ ಅರುಣ್ ಕುಮಾರ್ ಪೂಜಾರ್ ಅವರಿಗೆ ಹಾವೇರಿ ಜಿಲ್ಲಾಧ್ಯಕ್ಷ ಸ್ಥಾನ ನೀಡಲಾಗಿದೆ.
39 ಜಿಲ್ಲಾಧ್ಯಕ್ಷರ ಪೈಕಿ ಒಂದು ಜಿಲ್ಲೆಗೆ ಒಬ್ಬರು ಮಹಿಳೆಯರನ್ನು ನೇಮಿಸಲಾಗಿದೆ. ಬೆಳಗಾವಿ ನಗರ ಘಟಕದ ಅಧ್ಯಕ್ಷರನ್ನಾಗಿ ಗೀಡಾ ಸುತಾರ್ ಅವರನ್ನು ನೇಮಿಸಲಾಗಿದೆ.