ರಾಜ್ಯ

ರಾಜ್ಯದ 39 ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರ ನೇಮಕ!

ಬೆಂಗಳೂರು: ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಿಸಿದೆ. ಈ ಪೈಕಿ 9 ಜಿಲ್ಲೆಗಳಲ್ಲಿ ಹಾಲಿ ಅಧ್ಯಕ್ಷರುಗಳನ್ನೇ ಮುಂದುವರಿಸಲಾಗಿದೆ.

ಈ ಬಗ್ಗೆ ರಾಜ್ಯಾಧ್ಯಕ್ಷ ಬಿ . ವೈ ವಿಜಯೇಂದ್ರ ಪ್ರಕಟಣೆ ಹೊರಡಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಪಕ್ಷದನಿಷ್ಠಾವಂತರನ್ನೂ ಗುರುತಿಸಿ ಜವಾಬ್ದಾರಿ ವಹಿಸಿದ್ದಾರೆ.

ಹಾಲಿ ಶಾಸಕರಾದ ಡಾ.ಶಿವರಾಜ್ ಪಾಟೀಲ್ ಅವರಿಗೆ ರಾಯಚೂರು ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರಿಗೆ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಮಾಜಿ ಶಾಸಕರಾದ ಎಲ್.ನಾಗೇಂದ್ರ ಅವರಿಗೆ ಮೈಸೂರು ನಗರ ಜಿಲ್ಲಾಧ್ಯಕ್ಷ,ಸಿ.ಎಸ್.ನಿರಂಜನ್‌ಕುಮಾರ್ ಅವರಿಗೆ ಚಾಮರಾಜ ನಗರ ಜಿಲ್ಲಾಧ್ಯಕ್ಷ ಹಾಗೂ ಅರುಣ್ ಕುಮಾರ್ ಪೂಜಾರ್ ಅವರಿಗೆ ಹಾವೇರಿ ಜಿಲ್ಲಾಧ್ಯಕ್ಷ ಸ್ಥಾನ ನೀಡಲಾಗಿದೆ.

39 ಜಿಲ್ಲಾಧ್ಯಕ್ಷರ ಪೈಕಿ ಒಂದು ಜಿಲ್ಲೆಗೆ ಒಬ್ಬರು ಮಹಿಳೆಯರನ್ನು ನೇಮಿಸಲಾಗಿದೆ. ಬೆಳಗಾವಿ ನಗರ ಘಟಕದ ಅಧ್ಯಕ್ಷರನ್ನಾಗಿ ಗೀಡಾ ಸುತಾ‌ರ್ ಅವರನ್ನು ನೇಮಿಸಲಾಗಿದೆ.

andolanait

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

27 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

31 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

36 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

42 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago