Mysore
22
haze

Social Media

ಭಾನುವಾರ, 25 ಜನವರಿ 2026
Light
Dark

ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ

vidhan sowdha

ಬೆಂಗಳೂರು : ಗ್ರೇಟರ್‌ ಬೆಂಗಳೂರು ಪ್ರಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್‌, ಬೈರತಿ ಸುರೇಶ್‌, ದಿನೇಶ್‌ ಗುಂಡೂರಾವ್‌, ಕೃಷ್ಣ ಬೈರೇಗೌಡ, ಜಮೀರ್‌ ಅಹ್ಮದ್‌ ಪದನಿಮಿತ್ತ ಸದಸ್ಯರಾಗಿ ಪ್ರಧಿಕಾರದಲ್ಲಿ ಸ್ಥಾನ ಪಡೆದಿದ್ದಾರೆ.

ಐದು ವಲಯದ ಮಹಾಪೌರರು, ಐದು ವಲಯದ ಆಯುಕ್ತರು, ಬೆಂಗಳೂರು ವಿಧಾನಸಭಾ ಸದಸ್ಯರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಸಂಸದರನ್ನು ಪ್ರಾಧಿಕಾರ ಒಳಗೊಂಡಿದೆ.

Tags:
error: Content is protected !!