ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ಹಾಗೂ ಅಧಿಕಾರಿ ದುರ್ಬಳಕೆ ಸೇರಿದಂತೆ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಸಾಪಗೆ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಗಾಯತ್ರಿ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.
ಆದೇಶದ ಬೆನ್ನಲ್ಲೇ ಕೆ.ಎಂ.ಗಾಯತ್ರಿ ಅವರು ಕಸಾಪ ಕೇಂದ್ರ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದ್ದಾರೆ.
ಮುಂದಿನ ಮೂರು ತಿಂಗಳವರೆಗೆ ಅಥವಾ ಕಸಾಪದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಯುವವರೆಗೆ ಆಡಳಿತಾಧಿಕಾರಿಯಾಗಿ ಗಾಯತ್ರಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.





