ರಾಜ್ಯ

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ್ : ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ವಿಷಯವನ್ನು ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಕ್ಕಳಿಗೆ ನೀಡಲಾಗುವ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಎರಡು ದಿನ ಬೀದರ್ ನಲ್ಲಿ ಕಲಬುರಗಿ ವಿಭಾಗ ಮಟ್ಟದ ಅಧಿಕಾರಗಳ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅನುದಾನದಡಿ ಹಲವು ಯೋಜನೆಗಳು ನಡೆಯುತ್ತಿದ್ದು., ಯೋಜನೆಗಳು ಜನರಿಗೆ ತಲುಪುವಂತೆ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ಹೇಳಿದರು.

20 ಭಾಗ್ಯಲಕ್ಷ್ಮಿ ಬಾಂಡ್ ಫಲಾನುಭವಿಗಳಿಗಾಗಿ ಶೋಧ: ಈಗಾಗಲೇ ಭಾಗ್ಯಲಕ್ಷ್ಮಿ ಬಾಂಡ್ ಪಡೆದ 1.60ಲಕ್ಷ ಜನರ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ವಿಳಾಸ ಪತ್ತೆಯಾಗಿಲ್ಲ.‌ ಇಂಥವರು ತಮ್ಮ ಸಮೀಪದ ನಮ್ಮ ಕಚೇರಿಗೆ ಬಂದು ಭೇಟಿಯಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.

ಈ ಭಾಗದ ಏಳು ಜಿಲ್ಲೆಗಳ ಆಗು ಹೋಗುಗಳ ಬಗ್ಗೆ ಚರ್ಚಿಸಿದ್ದು, . 35 ಲಕ್ಷ ಮಕ್ಕಳು ನಿತ್ಯ ನಮ್ಮ ಅಂಗನವಾಡಿ ಕೇಂದ್ರಕ್ಕೆ ಬರುತ್ತಿದ್ದಾರೆ.‌ಎಲ್ಲಾ ಮಕ್ಕಳಿಗೆ ಗುಣಮಟ್ಟದ ಆಹಾರ ಸರಬರಾಜು ಮಾಡಲಾಗುತ್ತದೆ.

ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿದ್ದು, ಜನರಿಗೆ ತಿಳಿವಳಿಕೆ ಮೂಡಿಸಲು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಅಂಗನವಾಡಿ ನೇಮಕಾತಿ ವಿಳಂಬವಾಗದಂತೆ ಮತ್ತು ಹೆಚ್ಚು ಪಾರದರ್ಶಕವಾಗಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಗರಿಷ್ಠ 90 ದಿನಗಳಲ್ಲಿ ನೇಮಕಾತಿ ಪೂರ್ಣಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ನಮ್ಮ ಇಲಾಖೆ ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ, ಅಧಿಕಾರಿಗಳು ಹೆಚ್ಚು ಕಾಳಜಿಯಿಂದ ಕೆಲಸ ಮಾಡಬೇಕು. ಕೇಂದ್ರ ಹಾಗೂ ರಾಜ್ಯದಿಂದ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಬೇಕು ಎಂದು ತಿಳಿಸಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಈ ಭಾಗದಲ್ಲಿ ಗೃಹ ಲಕ್ಷ್ಮೀ ಯೋಜನೆಯಲ್ಲಿ 10 ಸಾವಿರ ಕೋಟಿ ರೂ ನೀಡಲಾಗಿದೆ. ಯಾರಿಗೂ ಯೋಜನೆ ಕೈ ತಪ್ಪದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಗೃಹ ಲಕ್ಷ್ಮೀ ಸಂಘಗಳ ಮೂಲಕ ಇನ್ನೂ ಹೆಚ್ಚಿನ ಪ್ರಯೋಜನವಾಗುವಂತೆ ಹೇಗೆ ಮಾಡಬಹುದು ಎನ್ನುವ ಚಿಂತನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬೀದರ್ ಪೊಲೀಸ್ ಇಲಾಖೆಯ ಅಕ್ಕ ಪಡೆ ಉತ್ತಮವಾಗಿ ಕೆಲಸ ಮಾಡುತ್ತಿದೆ. ಬೇರೆ ಜಿಲ್ಲೆಗಳಲ್ಲೂ ಇದೇ ಮಾದರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago