Mysore
22
light rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು. ಅಂತಿಮವಾಗಿ ಕರ್ನಾಟಕ ಹೈಕೋರ್ಟ್‌ ಬೈಕ್‌ ಟ್ಯಾಕ್ಸಿ ಸೇವೆಗೆ ಒಪ್ಪಿಗೆಯನ್ನು ನೀಡಿದೆ. ಇದು ಆಟೋ ಚಾಲಕರ ಆಕ್ರೋಶಕ್ಕೆ ಗುರಿಯಾಗಿದೆ.

ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಈ ಕುರಿತು ಕಾನೂನು ಹೋರಾಟ ಮುಂದುವರಿಸಲು ತೀರ್ಮಾನಿಸಿದೆ. ಹೈಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

ಈ ಕುರಿತು ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಗಿದ್ದು, ಬೈಕ್‌ ಟ್ಯಾಕ್ಸಿ ಕುರಿತ ಹೈಕೋರ್ಟ್‌ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಎಸ್‌ಎಲ್‌ಪಿ ಸಲ್ಲಿಸಲು ಸರ್ಕಾರಕ್ಕೆ ಒಕ್ಕೂಟ ಮನವಿ ಸಲ್ಲಿಸಿದೆ.

Tags:
error: Content is protected !!