ಬೆಂಗಳೂರು : ಪುನೀತ್ ರಾಜ್‌ಕುಮಾರ್ ಅವರು ಅಗಲಿ ಇಂದಿಗೆ 2 ವರ್ಷಗಳು ಉರುಳಿವೆ. ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ನೆರವೇರಿತ್ತು. ಇದೀಗ ಅಪ್ಪು ಸ್ಮಾರಕಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದ್ದಾರೆ. ಈ ವೇಳೆ ಪುನೀತ್ ಬಗ್ಗೆ ಶಿವಣ್ಣ ಭಾವುಕರಾಗಿದ್ದಾರೆ.
ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆನೇ ಇದ್ದಾರೆ. ಇಲ್ಲಿ ಯಾಕೆ ನಾನು ಜಾಸ್ತಿ ಬರಲ್ಲ ಅಂದರೆ, ಅಪ್ಪು ಸಮಾಧಿಗೆ ಬಂದು ಪೂಜೆ ಮಾಡಿ ಅವರನ್ನು ಇಲ್ಲಿಂದ ದೂರ ಕಳಿಸೋಕೆ ಮನಸ್ಸಿಗೆ ತುಂಬಾ ನೋವಾಗುತ್ತದೆ. ಅಪ್ಪು ಯಾವಾಗಲೂ ನಮ್ಮ ಮನಸ್ಸಿನಲ್ಲಿ, ಯೋಚನೆಯಲ್ಲಿರುತ್ತಾರೆ. ಅವರ ಬಗ್ಗೆ ಏನಾದರೂ ಮಾತು ಬಂದೇ ಬರುತ್ತೆ ಮನೆಯಲ್ಲಿ ಆಗ ತುಂಬಾ ಹರ್ಟ್ ಆಗುತ್ತದೆ. ಅಪ್ಪು ಕಣ್ಣು ನಮ್ಮನ್ನ ನೋಡ್ತಿದೆ. ಅದೇ ಸಮಾಧಾನ ಅಷ್ಟೇ ಎಂದು ಶಿವಣ್ಣ ಭಾವುಕರಾಗಿದ್ದಾರೆ.
ನಮ್ಮ ಅಪ್ಪನಿಗಿಂತ ಡಬಲ್ ಹೆಸರು ಪುನೀತ್ ಸಂಪಾದಿಸಿದ್ದಾರೆ. ಅಭಿಮಾನಿಗಳಿಗೆ ಅಪ್ಪು ಮೇಲಿರೋ ಪ್ರೀತಿ, ವಿಶ್ವಾಸ ನೋಡಿದ್ರೆ ತುಂಬಾ ಹೆಮ್ಮೆ ಅನಿಸುತ್ತದೆ. ಅದನ್ನ ನಾವು ಉಳಿಸಿಕೊಂಡು ಹೋಗುತ್ತೇವೆ ಎಂದು ಶಿವರಾಜ್‌ಕುಮಾರ್ ಹೇಳಿದರು.
ಕಂಠೀರವ ಸ್ಟುಡಿಯೋಗೆ ಆಗಮಿಸಿದ ಶಿವಣ್ಣ ದಂಪತಿ, ಮೊದಲು ತಂದೆ-ತಾಯಿ ಸಮಾಧಿಗೆ ನಮಸ್ಕರಿಸಿ ಬಳಿಕ ಅಪ್ಪು ಸಮಾಧಿಗೆ ನಮಿಸಿದರು. ಈ ವೇಳೆ, ಶಿವಣ್ಣ ನೋಡಲು ಅಭಿಮಾನಿಗಳ ದಂಡೇ ಭಾಗಿಯಾಗಿತ್ತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಯಿತು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…