ರಾಜ್ಯ

ಅಪ್ಪು ಸಿನಿಮಾ ರಿ-ರಿಲೀಸ್‌: ಅಭಿಮಾನಿಗಳೊಂದಿಗೆ ತನ್ನದೇ ಚಿತ್ರ ವೀಕ್ಷಿಸಿದ ರಕ್ಷಿತಾ

ಬೆಂಗಳೂರು: ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ 50 ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಸಿನಿಮಾ ರಿ-ರಿಲೀಸ್‌ ಆಗಿದ್ದು, ಅಭಿಮಾನಿಗಳೊಂದಿಗೆ ಸೇರಿ ತನ್ನದೇ ಚಿತ್ರವನ್ನು ಕ್ರೇಜಿಕ್ವಿನ್‌ ರಕ್ಷಿತಾ ವೀಕ್ಷಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟು ಹಬ್ಬ ಮಾರ್ಚ್‌.17 ರಂದು ಇದೆ. ಈ ಹಿನ್ನೆಲೆಯಲ್ಲಿ ಅಪ್ಪು ಚಿತ್ರತಂಡ ಪುನೀತ್‌ ರಾಜ್‌ಕುಮಾರ್‌ ಹಾಗೂ ರಕ್ಷಿತಾ ನಟನೆಯ ಅಪ್ಪು ಚಿತ್ರವನ್ನು ಬೆಂಗಳೂರಿನ ವೀರೇಶ್‌ ಚಿತ್ರಮಂದಿರದಲ್ಲಿ ಇಂದು(ಮಾರ್ಚ್.‌14) ಅಪ್ಪು ಸಿನಿಮಾವನ್ನು ರಿ-ರಿಲೀಸ್‌ ಮಾಡಿದೆ. ಹೀಗಾಗಿ ಅಭಿಮಾನಿಗಳೊಂದಿಗೆ ರಕ್ಷಿತಾ ಅಪ್ಪು ಚಿತ್ರವನ್ನು ವೀಕ್ಷಿಸಿ ರಂಜಿಸಿದ್ದಾರೆ. ಈ ಸಂದರ್ಭದಲ್ಲಿ ಅರಸು ಮತ್ತು ಆಕಾಶ್‌ ಚಿತ್ರಗಳ ನಿರ್ದೇಶಕ ಮಹೇಶ್‌ ಬಾಬು ಸಹ ಸಾಥ್‌ ನೀಡಿದ್ದಾರೆ.

ಇನ್ನು ಈ ವೇಳೆ ಬಿಗ್‌ ಬಾಸ್‌-10ರ ವಿಜೇತ ಕಾರ್ತಿಕ್‌ ಮಹೇಶ್‌, ಸ್ಪರ್ಧಿಗಳಾದ ಕಿಶನ್‌, ರಕ್ಷಕ್‌ ಬುಲೆಟ್‌ ಹಾಗೂ ನಮ್ರತಾ ಗೌಡ ಸಹ ಸಿನಿಮಾವನ್ನು ವೀಕ್ಷಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಪುನೀತ್‌ ರಾಜ್‌ ಕುಮಾರ್‌ ಹಾಗೂ ನಟಿ ರಕ್ಷಿತಾ ಅವರು 2002ರಲ್ಲಿ ಪೂರಿ ಜಗನ್ನಾಥ್ ನಿರ್ದೇಶನದ ಅಪ್ಪು ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದರು.

ಅರ್ಚನ ಎಸ್‌ ಎಸ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

4 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

7 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

8 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

10 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

11 hours ago