ಬೆಂಗಳೂರು: ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಾರ ಆಪ್ತ ಎ.ಎಸ್ ಬಸವರಾಜು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
75 ವರ್ಷದ ಬಸವರಾಜು ಅವರು ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಇಂದು (ಆ.16) ಅರಸೀಕೆರೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ತಮ್ಮ ಆಪ್ತರ ಅಗಲಿಕೆಗೆ ಮಾಜಿ ಸಿಎಂ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮಾಜಿ ಶಾಸಕರಾದ ಶ್ರೀ ಎ.ಎಸ್.ಬಸವರಾಜು ಅವರ ನಿಧನಕ್ಕೆ ಸಂತಾಪ ಕೋರುವೆ.
2004-2007 ರವರೆಗೆ ಬಿಜೆಪಿ ಶಾಸಕರಾಗಿ ಸೇವೆ ಸಲ್ಲಿಸಿ ಪಕ್ಷ ನಿಷ್ಠರು ಮಾತ್ರವಲ್ಲದೇ ಸಂಘ ಸೇವಕರಾಗಿಯೂ ಬಸವರಾಜು ತಮ್ಮದೇ ಆದ ಘನ ವ್ಯಕ್ತಿತ್ವ ಮೈಗೂಡಿಸಿಕೊಂಡಿದ್ದವರು.
ಮಾನ್ಯ ಬಸವರಾಜು ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬರೆದುಕೊಂಡು ಅಂತಿಮ ನಮನ ಸಲ್ಲಿಸಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…