Mysore
31
clear sky

Social Media

ಸೋಮವಾರ, 23 ಫೆಬ್ರವರಿ 2026
Light
Dark

ಪೊಲೀಸರ ವಿರುದ್ಧ ನಿಖಿಲ್ ಕುಮಾರಸ್ವಾಮಿ ಫುಲ್ ಗರಂ

ರಾಮನಗರ: ಜೆಡಿಎಸ್‌ ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿ ರಾಮನಗರದಲ್ಲಿ ಜೆಡಿಎಸ್‌ ಮತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಯನ್ನು ಪೊಲೀಸರು ಎಳೆದಾಡಿದ್ದು, ಪೊಲೀಸರ ವಿರುದ್ಧ ನಿಖಿಲ್‌ ಫುಲ್‌ ಗರಂ ಆದರು.

ತಾಲೂಕಿನ ಹಳ್ಳಿಮಾಳ ವ್ಯವಸಾಯೋತ್ಪನ್ನ ಮಾರುಕಟ್ಟೆ ಚುನಾವನೆಯನ್ನ ಕಾಂಗ್ರೆಸ್‌ ಶಾಸಕ ಇಕ್ಬಾಲ್‌ ಹುಸೇನ್‌ ಅಧಿಕಾರ ದುರ್ಬಳೆ ಮಾಡಿಕೊಂಡು ಮುಂದೂಡಿದ್ದಾರೆ. ಎರಡು ಬಾರಿ ಚುನಾವಣೆ ನಿಗದಿಯಾದ್ರೂ ಚುನಾವಣೆ ನಡೆಸಿಲ್ಲ ಎಂದು ಆರೋಪಿಸಿ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಸಹಕಾರ ಸಂಘಗಳ ನಿಬಂಧಕ ಕಚೇರಿ ಮುಂದೆ ಪ್ರತಿಭಟಿಸಿದರು.

ಈ ಸಂದರ್ಭ ಕಂದಾಯ ಭವನಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿ ನಿಂಬಂಧಕರ ಕಚೇರಿಗೆ ಬೀಗ ಜಡಿಯಲು ಯತ್ನಿಸಿದ್ದಾರೆ. ಅಲ್ಲದೆ ಕಂದಾಯ ಭವನದ ಗ್ಲಾಸ್‌ ಪುಡಿಪುಡಿ ಮಾಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ತಡೆದಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರು ನಡುವೆ ವಾಗ್ವಾದ ನಡೆಯಿತು.

Tags:
error: Content is protected !!