ರಾಮನಗರ: ಜೆಡಿಎಸ್ ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿ ರಾಮನಗರದಲ್ಲಿ ಜೆಡಿಎಸ್ ಮತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯನ್ನು ಪೊಲೀಸರು ಎಳೆದಾಡಿದ್ದು, ಪೊಲೀಸರ ವಿರುದ್ಧ ನಿಖಿಲ್ ಫುಲ್ ಗರಂ ಆದರು.
ತಾಲೂಕಿನ ಹಳ್ಳಿಮಾಳ ವ್ಯವಸಾಯೋತ್ಪನ್ನ ಮಾರುಕಟ್ಟೆ ಚುನಾವನೆಯನ್ನ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅಧಿಕಾರ ದುರ್ಬಳೆ ಮಾಡಿಕೊಂಡು ಮುಂದೂಡಿದ್ದಾರೆ. ಎರಡು ಬಾರಿ ಚುನಾವಣೆ ನಿಗದಿಯಾದ್ರೂ ಚುನಾವಣೆ ನಡೆಸಿಲ್ಲ ಎಂದು ಆರೋಪಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಸಹಕಾರ ಸಂಘಗಳ ನಿಬಂಧಕ ಕಚೇರಿ ಮುಂದೆ ಪ್ರತಿಭಟಿಸಿದರು.
ಈ ಸಂದರ್ಭ ಕಂದಾಯ ಭವನಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿ ನಿಂಬಂಧಕರ ಕಚೇರಿಗೆ ಬೀಗ ಜಡಿಯಲು ಯತ್ನಿಸಿದ್ದಾರೆ. ಅಲ್ಲದೆ ಕಂದಾಯ ಭವನದ ಗ್ಲಾಸ್ ಪುಡಿಪುಡಿ ಮಾಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ತಡೆದಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರು ನಡುವೆ ವಾಗ್ವಾದ ನಡೆಯಿತು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…