Mysore
28
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಯೋಧ ದುರ್ಮರಣ

ಬೆಳಗಾವಿ: ಮಣಿಪುರ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ್‌ ಖೊತ್‌(42) ಎಂಬ ಯೋಧನ ದುರ್ಮರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಅಪಘಾತವೂ ಮಂಗಳವಾರ(ಡಿಸೆಂಬರ್‌.24) ಆರು ಯೋಧರು ಕರ್ತವ್ಯ ಮುಗಿಸಿಕೊಂಡು ಬರುತ್ತಿರುವಾಗ ನಡೆದಿದೆ. ಇಂಪಾಲಾ ಕಣಿವೆ ಬಳಿ ಭೂಮಿ ಕುಸಿದು ವಾಹನ ಕಂದಕಕ್ಕೆ ಉರುಳಿತ್ತು. ಈ ವೇಳೆ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.

ಆರು ಯೋಧರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಖೋತ್‌ ಎಂಬುವವರು ಮಾತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.

Tags:
error: Content is protected !!