ರಾಜ್ಯ

ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್‌ ಬೆಳೆ ಹಾನಿ

ಬೆಂಗಳೂರು: ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ಮಾಡಿದ ಬೆಳೆಹಾನಿ ಜಂಟಿ ಸಮೀಕ್ಷೆ ಹಾಗೂ ಪರಿಹಾರ ವಿವರಗಳ ಕಂದಾಯ ಇಲಾಖೆ ಮಾಹಿತಿ ನೀಡಿದೆ.

ಈ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಈವರೆಗೂ ಬಿಡುಗಡೆಯಾದ ಪರಿಹಾರದ ಬಗ್ಗೆ ಮಾಹಿತಿ ನೀಡಿದ್ದಾರೆ.

2025ರ ನೈಋತ್ಯ ಮುಂಗಾರು ಅವಧಿಯಲ್ಲಿ ಸೆಪ್ಟೆಂಬರ್ ಮೊದಲ ವಾರದವರೆಗೆ ಸುರಿದ ಭಾರೀ ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕೆ ಬೆಳೆ ಪ್ರದೇಶಗಳು ಜಲಾವೃತಗೊಂಡು ಸುಮಾರು 5.29 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ ಬೆಳೆ ನಷ್ಟವಾಯಿತು.

ಇದನ್ನು ಓದಿ : ಬೆಳೆಹಾನಿ ಜಂಟಿಸಮೀಕ್ಷೆಗೆ ಸೂಚನೆ, ವರದಿ ನಂತರ ಪರಿಹಾರ ವಿತರಣೆ ಎಂದ ಸಿಎಂ ಸಿದ್ದರಾಮಯ್ಯ

ಬೆಳೆ ಹಾನಿಗೊಂಡ ಜಿಲ್ಲೆಗಳು ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಬೆಳೆ ಹಾನಿ ಪರಿಹಾರ ಪಾವತಿಗೆ ಸಿದ್ಧವಾಗಿದ್ದವು. ತದನಂತರ ಸೆಪ್ಟೆಂಬರ್ ಮಾಹೆಯ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಉತ್ತರ ಒಳನಾಡಿನ ಭೀಮಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ನದಿ ಪ್ರವಾಹ ಉಂಟಾಗಿ ಈ ಭಾಗದ ಜಿಲ್ಲೆಗಳಾದ ಕಲಬುರ್ಗಿ, ಯಾದಗಿರಿ, ಬೀದರ್‌ ಹಾಗೂ ವಿಜಯಪುರ 4 ಜಿಲ್ಲೆಗಳಲ್ಲಿ ಸುಮಾರು 7.24 ಲಕ್ಷ ಹೆಕ್ಟೇರ್‌ ಬೆಳೆ ನಷ್ಟಕ್ಕೆ ಕಾರಣವಾಯಿತು ಎಂದು ಹೇಳಿದ್ದಾರೆ.

ಈ ನಾಲ್ಕು ಜಿಲ್ಲೆಗಳಲ್ಲಿ ಬೆಳೆ ಹಾನಿ ಜಂಟಿ ಸಮೀಕ್ಷೆಯನ್ನು ಮತ್ತೆ ಮಾಡಬೇಕಾದ ಅಗತ್ಯವಿದ್ದು, ಬೆಳೆ ಹಾನಿ ಪ್ರದೇಶವು ಪರಿಷ್ಕರಣೆಗೊಳ್ಳಲಿದೆ. ಜಂಟಿ ಸಮೀಕ್ಷೆಯು ಸುಮಾರು 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ.

ಒಟ್ಟಾರೆಯಾಗಿ 2025 ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್‌ ಬೆಳೆ ಹಾನಿಯಾಗಿರುವುದು ಕಂಡು ಬಂದಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

1 hour ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

1 hour ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

2 hours ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

14 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

16 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

17 hours ago