ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಬೆಂಗಳೂರಿನ ಆರ್‌ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ ಮಾಡಲಾಗಿತ್ತು, ಬಳಿಕ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ವಿರುದ್ಧ ಕೇಸ್ ದಾಖಲಾದಾಗಿನಿಂದ ಪೊಲೀಸರು ಅವರ ಮೇಲೆ ನಿಗಾ ವಹಿಸಿದ್ದರು. ಸದ್ಯ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಘಟನೆ ಹಿನ್ನೆಲೆ…
ಘನತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ನೀಡಲು ರೂ.30ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರ ಚಲುವಾರಜು ಎಫ್‌ಐಆರ್ ದಾಖಲಿಸಿದ್ದರು.
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…