ರಾಜ್ಯ

ಶಾಸಕ ಮುನಿರತ್ನ ಬಂಧನ ದ್ವೇಷದ ರಾಜಕಾರಣ: ಆರ್.ಅಶೋಕ

ಧ್ವನಿ ಮುದ್ರಣ ಎಫ್ಎಸ್ಎಲ್ ಗೆ ಕಳುಹಿಸಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ಮಾತಾಡುತ್ತಿರಲಿಲ್ಲ

ಬೆಂಗಳೂರು: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವನಿ ಮುದ್ರಣ ಶಾಸಕರದ್ದೇ ಎಂದು ಸಾಬೀತಾದ ಬಳಿಕ ಬಂಧಿಸಬೇಕಿತ್ತು. ಕಾನೂನಿಗೆ ಯಾರೂ ಅತೀತರಲ್ಲ ಎಂದರು.

ಟಿ.ಜೆ.ಅಬ್ರಹಾಂ ದೂರಿನ ಆಧಾರದ ಮೇಲೆ ರಾಜ್ಯಪಾಲರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದರು.‌ ಆದರೂ ಅದು ಈಗ ನ್ಯಾಯಾಲಯದಲ್ಲಿದ್ದು, ಅದಕ್ಕೆ ನಾವ್ಯಾರೂ ಆಕ್ಷೇಪ ಮಾಡಿಲ್ಲ. ಆದರೆ ಇಲ್ಲಿ ದೂರು ನೀಡಿದ ಕೂಡಲೇ ವಿಚಾರಣೆ ಮಾಡದೆ‌ ನೋಟಿಸ್‌ ನೀಡದೆ ಬಂಧಿಸಲಾಗಿದೆ. ಇಲ್ಲಿ ಆತುರದ‌ ಕ್ರಮವಾಗಿದ್ದು, ಏಕಾಏಕಿ ಬಂಧನವಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಲೀಡ್ ಬಂದಿರುವುದು ಕೂಡ ಇದಕ್ಕೆ ಕಾರಣ. ಧ್ವನಿ ಮುದ್ರಣವನ್ನು ಎಫ್ಎಸ್ಎಲ್ ಗೆ ಕಳುಹಿಸಿ,‌ ತನಿಖೆ ಮಾಡಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ಮಾತಾಡುತ್ತಿರಲಿಲ್ಲ. ಯಾವುದೇ ಪ್ರಕರಣದಲ್ಲಿ ಸತ್ಯವನ್ನು ಪರಿಶೀಲಿಸಬೇಕು ಎಂದರು.

ಇದು ಪೂರ್ವ ಯೋಜಿತ ಎಂಬುದು ಎಲ್ಲರಿಗೂ ಗೊತ್ತಿದೆ. ನಾನು ಜಾತಿ ನಿಂದನೆ ಮಾಡಿಲ್ಲ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ. ಇದು ಸಾಬೀತು ಕೂಡ ಆಗಿಲ್ಲ. ಈ ರೀತಿ ಪ್ರಕರಣ ದಾಖಲಾದಾಗ ಪರಿಶೀಲಿಸಿಯೇ ಕ್ರಮ ಕೈಗೊಳ್ಳಬೇಕು. ರಾಯಚೂರಿನಲ್ಲಿ ಪೊಲೀಸ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಶಾಸಕನನ್ನು ಸಿಎಂ ಮನೆಗೆ ಕರೆಸಿಕೊಂಡು ಕಾಫಿ ಕೊಟ್ಟಿದ್ದರು‌. ಕೃಷಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದರು ಸಚಿವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ.

ಸರ್ಕಾರ ಎಷ್ಟೇ ಪ್ರಕರಣ‌ ದಾಖಲಿಸಿದರೂ ಬಿಜೆಪಿ ಹೆದರುವುದಿಲ್ಲ. ಸರ್ಕಾರಕ್ಕೆ ಈಗ ಭಯ ಬಂದಿದೆ. ಪ್ರತಿ ದಿನ ವಸೂಲಿ, ಭ್ರಷ್ಟಾಚಾರ ‌ನಡೆಯುತ್ತಿರುವುದು ಮಾಧ್ಯಮಗಳಲ್ಲಿ ಬರುತ್ತಿದೆ. ಆದ್ದರಿಂದ ಹೀಗೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.

ಮಂಡ್ಯದ ನಾಗಮಂಗಲದಲ್ಲಿ ಗಣಪತಿಗೂ ನಿರ್ಬಂಧ ವಿಧಿಸಲಾಗಿದೆ. ಮತಾಂಧರು ಬಾಂಬ್, ಮಚ್ಚು ಬಳಸಿ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಕಾಂಗ್ರೆಸ್ ನ ಮುಸ್ಲಿಮ್ ಓಲೈಕೆ ರಾಜಕಾಣದಿಂದಲೇ ಹೀಗಾಗಿದೆ. ಹಿಂದೂಗಳು ಮುಂದೊಂದು ದಿನ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಭ್ರಷ್ಟಾಚಾರ ಮತ್ತು ಕೋಮುಗಲಭೆ ಪ್ರಕರಣವನ್ನು ಬೇರೆಡೆ ತಿರುಗಿಸಲು ಈ ರೀತಿ ಮಾಡಿದ್ದಾರೆ. ಡಾ.ಜಿ.ಪರಮೇಶ್ವರ್ ಅವರಂತಹ ಹಿರಿಯ ನಾಯಕರು ಗೃಹ ಸಚಿವರಾಗಿ ಇಂತಹ ಕೆಲಸ ಮಾಡುವುದು ಶೋಭೆ ತರುವುದಿಲ್ಲ. ಇದು ಬಹಳ ಹಳೆಯ ಪ್ರಕರಣ ಎನ್ನಲಾದರೂ, ದಿಢೀರನೆ ಈಗ ಬಂಧಿಸಿದ್ದಾರೆ. ಒಬ್ಬ ಸಾಮಾನ್ಯ ವ್ಯಕ್ತಿ ನೇರವಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಇದು ಪೂರ್ವ ಯೋಜಿತ ಎಂದು ಇದರಿಂದಲೇ ತಿಳಿಯುತ್ತದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

5 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

7 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago